ಭದ್ರಾವತಿ: ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಕ್ಕಳ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಕಂಪ್ಯೂಟರ್ ಹಾಗೂ ಲ್ಯಾಪ್ಟಾಪ್ ವಿತರಿಸಲು ಮುಂದಾಗಿರುವುದು ಮಾದರಿ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
ಹಳೇನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆಯ ‘ಜ್ಞಾನತಾಣ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭವಿಷ್ಯದ ಕಲಿಕೆಯನ್ನು ಗಮನ ದಲ್ಲಿಟ್ಟುಕೊಂಡು ಕಾರ್ಯಕ್ರಮ ನಿರ್ವಿುಸಿದ್ದು ಸೌಲಭ್ಯ ವಂಚಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ವ್ಯವಸ್ಥಿತ ಅಂರ್ತಜಾಲ ಶಿಕ್ಷಣ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಯೋಜನಾಧಿಕಾರಿ ಪ್ರಸಾದ್ ಮಾತನಾಡಿ, 5ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಯೋಜನೆ ಮೂಲಕ ಉಚಿತ ಶಿಕ್ಷಣ ದೊರೆಯಲಿದ್ದು ಪ್ರಥಮ ವರ್ಷದಲ್ಲಿ 1 ಲಕ್ಷ ವಿದ್ಯಾರ್ಥಿಗಳಿಗೆ 81 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಮುಖಂಡರಾದ ಕರುಣಾಮೂರ್ತಿ, ಜಿ.ಆನಂದ ಕುಮಾರ್, ಪಾಲಾಕ್ಷಪ್ಪ ಇತರರಿದ್ದರು.