ಜಿಲ್ಲೆ

ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಇಂದಿರಾ ಎನ್ ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಿತು.

ಉಡುಪಿ ಜಿಲ್ಲಾ ಉಪನಿರ್ದೇಶಕ ಮಾರುತಿ ಕಾರ್ಯಾಗಾರ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ದಿನೇಶ್ ಎಂ.ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಡಾ.ದಯಾನಂದ ಪೈ, ಉಡುಪಿ ಜಿಲ್ಲಾ ಗಣಕ ವಿಜ್ಞಾನ ಉಪನ್ಯಾಸಕರ ಸಂಘ ಅಧ್ಯಕ್ಷ ಜ್ಞಾನೇಶ್ ಕೋಟ್ಯಾನ್, ಕಾರ್ಯದರ್ಶಿ ಶಕುಂತಲಾ ರಾಜೇಶ್ ಪಾಲನ್, ಖಜಾಂಚಿ ಬಿನು ಜಯಚಂದ್ರನ್ ಉಪಸ್ಥಿತರಿದ್ದರು. ಎಸ್‌ಎಂಎಸ್ ಪದವಿಪೂರ್ವ ಕಾಲೇಜು ಬ್ರಹ್ಮಾವರದ ಗಣಕ ಶಾಸ್ತ್ರದ ಉಪನ್ಯಾಸಕ ಸಂತೋಷ್ ನೀಲಾವರ ಹಾಗೂ ಎಮ್‌ಐಟಿ ಮಣಿಪಾಲದ ಐಸಿಟಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ನಿಶಾ ಪಿ.ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ನಿರೂಪಿಸಿದರು.