ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಡಾ. ನಂದಾ ಪಾಟೀಲ ದತ್ತಿ ನಿಮಿತ್ತ ಆ. 6ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಭವನದಲ್ಲಿ ಡಾ. ನಂದಾ ಪಾಟೀಲ ವಚನ ಸಂಗೀತ ಪುರಸ್ಕಾರ-2024 ಪ್ರದಾನ ಸಮಾರಂಭ ಹಾಗೂ ಸಂಗೀತ ಕಾರ್ಯಕ್ರಮ ಏರ್ಪಡಿಸಿದೆ.
ಸಂಗೀತಗಾರ್ತಿ ಡಾ. ವೀಣಾ ಸವದತ್ತಿ ಅವರಿಗೆ ಡಾ. ನಂದಾ ಪಾಟೀಲ ವಚನ ಸಂಗೀತ ಪುರಸ್ಕಾರ ಪ್ರದಾನ ಮಾಡಲಾಗುವುದು. ಕವಿವಿ ಇಂಗ್ಲಿಷ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ಪಾಟೀಲ ಉಪಸ್ಥಿತರಿರುವರು. ಸಂಘದ ಅಧ್ಯಕ್ಷ ಚಂದ್ರಕಾಂತ ಗುರಪ್ಪ ಬೆಲ್ಲದ ಅಧ್ಯಕ್ಷತೆ ವಹಿಸುವರು. ನಂತರ ಡಾ. ವೀಣಾ ಸವದತ್ತಿ ಗಾಯನ ಪ್ರಸ್ತುತಪಡಿಸುವರು ಎಂದು ಪ್ರಕಟಣೆ ತಿಳಿಸಿದೆ.