ಜಿಲ್ಲೆ

ಉಪನ್ಯಾಸ ಸಮಾರೋಪ

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಜಿಲ್ಲಾಡಳಿತ ಮತ್ತು ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ವೈ.ಬಿ. ಅಣ್ಣಿಗೇರಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಆಶ್ರಯದಲ್ಲಿ ಅಖಂಡ ಧಾರವಾಡ ಜಿಲ್ಲೆಯ 77 ಸ್ವಾತಂತ್ರ‍್ಯ ಹೋರಾಟಗಾರರ ಕುರಿತು 77 ಉಪನ್ಯಾಸ ಮಾಲಿಕೆಗಳ ಸಮಾರೋಪ ಸಮಾರಂಭವನ್ನು ಆ. 14ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಽಕಾರಿ ದಿವ್ಯ ಪ್ರಭು ಉದ್ಘಾಟಿಸುವರು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಪಿ. ಸುರೇಶ ಹಾಗೂ ಉಪನ್ಯಾಸ ಮಾಲಿಕೆಯ ಜಿಲ್ಲಾ ನೋಡಲ್ ಅಽಕಾರಿ ಅಶೋಕ ಸವಣೂರ ಅತಿಥಿಗಳಾಗಿ ಭಾಗವಹಿಸುವರು. ಐತಿಹಾಸಿಕ ಅಣ್ಣಿಗೇರಿ ಸೇವಾ ಟ್ರಸ್ಟ್ನ ಅಧ್ಯಕ್ಷ ಪ್ರೊ. ನಾಗೇಶ ಅಣ್ಣಿಗೇರಿ ಅಧ್ಯಕ್ಷತೆ ವಹಿಸಿಸುವರು. ಇತಿಹಾಸ ಉಪನ್ಯಾಸಕರ ಸಂಘದ ಅಧ್ಯಕ್ಷ ಉದಯ ನಾಯಕ ಅವರು ವಿಶೇಷ ಉಪನ್ಯಾಸ ನೀಡುವರು. ವಿಶ್ವೇಶ್ವರಿ ಹಿರೇಮಠ ಹಾಗೂ ತಂಡ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.