ಜಿಲ್ಲೆ

ನೇಹಾ ಹಿರೇಮಠ್ ಹತ್ಯೆಗೆ ಖಂಡನೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಬಸವ ಬಳಗಗಳ ಒಕ್ಕೂಟ

ಮೈಸೂರು: ಹುಬ್ಬಳ್ಳಿಯಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರನ್ನು ಬರ್ಬರವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಬಸವ ಬಳಗಗಳ ಒಕ್ಕೂಟ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದೆ.
ಇಂತಹ ಪ್ರಕರಣ ಅತ್ಯಂತ ಹೇಯಕೃತ್ಯವಾಗಿದ್ದು, ಇದನ್ನು ಪಕ್ಷ, ಧರ್ಮ, ಜಾತಿ ಎಂದು ಪರಿಗಣಿಸದೆ ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಕೃತ್ಯ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಕಾನ್ಯ ಶಿವಮೂರ್ತಿ, ಬಸವ ಬಳಗಗಳ ಒಕ್ಕೂಟ ಅಧ್ಯಕ್ಷ ಎಂ.ಪ್ರದೀಪ್‌ಕುಮಾರ್ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.