ನಾಪೋಕ್ಲು: ಇಲ್ಲಿಗೆ ಸಮೀಪದ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಮಾಸಿಕ ಸಭೆ ಮಂಗಳವಾರ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್‌ಅಧ್ಯಕ್ಷತೆಯಲ್ಲಿ ಕಾರುಗಂದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು.
ನಂತರ ನಡೆದ ಸಭೆಯಲ್ಲಿ ಮುಂದಿನ ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು.
ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ, ಕೊಡಪಾಲು ತೀರ್ಥ ಗಣಪತಿ, ಸಮಿತಿಯ ಎಲ್ಲಾ ಪದಾಧಿಕಾರಿಗಳು ಇದ್ದರು. ಲಾಯಿತು.