ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಎಎಸ್​ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಮಾತನಾಡಿದರು. ರಿಷಿ ಆನಂದ, ರಾಜಶೇಖರ ಡಂಬಳ ಮತ್ತಿತರರಿದ್ದಾರೆ. 
ಜಿಲ್ಲೆ

ಕೆಎಎಸ್​ ಪರೀಕ್ಷೆ ಪಾರದರ್ಶಕವಾಗಿ ನಡೆಸಿ

ಗಿರೀಶ ಸಗರ

ವಿಜಯಪುರ: ಮುಂದಿನ ಆಡಳಿತದ ಅಧಿಕಾರಿಗಳು ರೂಪುಗೊಳ್ಳುವ ಕೆೆಎಎಸ್​ ಪರೀಕ್ಷೆಗಳು ಆ. 26 ರಂದು ನಗರದಲ್ಲಿ ನಡೆಯಲಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ$್ಮವಾಗಿ ಪಾರದರ್ಶಕತೆಯಿಂದ ಪರೀೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಪರೀೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2023&24 ನೇ ಸಾಲಿನ ಗೆಜೆಟೆಡ್​ ಪ್ರೊಬೇಷನರ್​ ಗ್ರೂಪ್​ ಎ ಹಾಗೂ ವೃಂದ ಪರೀಕ್ಷೆಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ 4&5 ಪರೀಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸುವುದು.

ಪರೀಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿ ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ ಪೊಲೀಸ್​ ಸಿಬ್ಬಂದಿ, ಗ್ರೂಪ್​&ಡಿ ಸಿಬ್ಬಂದಿ ಮತ್ತು ವಾಹನದ ವ್ಯವಸ್ಥೆ ಕುರಿತು ಅವರು ಸೂಚನೆ ನೀಡಿದರು.

ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಅಲ್ಲದೆ, ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್​ ಡಿವೈಸ್​, ಮೈಕ್ರೋಫೋನ್​ ಸೇರಿ ಇನ್ನಿತರ ಉಪಕರಣ ಬಳಸದಂತೆ ನಿಗಾವಹಿಸಬೇಕು.

ಪರೀಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ, ಬಾಡಿ ಕ್ಯಾಮರಾ, ಪ್ರಿಸ್ಕಿಂಗ್​, ಮುಖ ಚಹರೆ ಮತ್ತು ಜಾಮರ್​ಗಳನ್ನು ಉಪ ಪರೀಾ ಕೇಂದ್ರದ ಪರೀಾ ಕೊಠಡಿಗಳಲ್ಲಿ ಅಳವಡಿಸಬೇಕು. ಪರೀಾ ದಿನ ಅವುಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು.

ಪರೀಕ್ಷೆಗೂ ಅರ್ಧಗಂಟೆಯ ಮುಂಚೆ ಜಾಮರ್​ ಆನ್​ ಮಾಡಿ, ಪರೀಕ್ಷೆ ಮುಗಿದ ಅರ್ಧ ಗಂಟೆಯ ನಂತರ ಬಂದ್​ ಮಾಡಬೇಕು. ಎಲ್ಲ ಸಿಸಿಟಿವಿ ಕ್ಯಾಮರಾಗಳ ವೀಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಸಲು ಮಾನಿಟರ್​ ಅಳವಡಿಸಿ ವೆಬ್​ಕಾಸ್ಟಿಂಗ್​ ಕ್ರಮಕೈಗೊಳ್ಳಬೇಕು. ಪರೀಾ ಕೊಠಡಿಗಳಲ್ಲಿ ಗಾಳಿ, ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಗೃಹ ವ್ಯವಸ್ಥೆ ಸೇರಿ ಅಗತ್ಯ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಡಿಸಿ ಭೂಬಾಲನ್​ ಸೂಚನೆ ನೀಡಿದರು.

ಪ್ರತಿ ಅಭ್ಯರ್ಥಿಯ ಮಧ್ಯೆ 2 ಮೀಟರ್​ ಅಂತರವಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಪರೀಾ ಕೊಠಡಿಗಳಿಗೆ ತೆರಳಲು ವೀಲ್​ಚೇರ್​ ಸೌಲಭ್ಯ ಕಲ್ಪಿಸಬೇಕು.

ಹಿಯರಿಂಗ್​ ಏಯ್ಡ್​ ಧರಿಸಿದ ಅಭ್ಯರ್ಥಿಗಳು ಕಡ್ಡಾಯವಾಗಿ ವೈದ್ಯಕಿಯ ದಾಖಲೆ ಹಾಜರುಪಡಿಸಬೇಕು. ಅಭ್ಯರ್ಥಿಗಳ ಗುರುತಿನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್​, ಕ್ಯಾಲಕುಲೇಟರ್​ ಸೇರಿ ಯಾವುದೇ ಇಲೆಕ್ಟ್ರಾನಿಕ್​ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಎಂದು ಸೂಚಿಸಿದ ಅವರು, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು.

ಜಿಪಂ ಸಿಇಒ ರಿಷಿ ಆನಂದ, ಬಿಡಿಎ ಆಯುಕ್ತ ರಾಜಶೇಖರ ಡಂಬಳ, ಖಜಾನೆ ಇಲಾಖೆ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಸಿ.ಕೆ. ಹೊಸಮನಿ, ಪೊಲೀಸ್​ ಅಧಿಕಾರಿಗಳಾದ ರವಿ, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರಾಚಾರ್ಯರು, ಉಪನ್ಯಾಸಕರು ಮತ್ತಿತರರಿದ್ದರು.