ದೇವರಹಿಪ್ಪರಗಿ: ಗಣತಿದಾರರು ಹಾಗೂ ಮೇಲ್ವಿಚಾರಕರು ಜವಾಬ್ದಾರಿಯಿಂದ ಸಮೀಕ್ಷೆ ಕಾರ್ಯ ನಡೆಸಬೇಕೆಂದು ತಾಪಂ ಇಒ ಭಾರತಿ ಚಲಯವಯ್ಯ ಸೂಚಿಸಿದರು.
ಪಟ್ಟಣದ ಕೆಜಿಎಸ್ ಶಾಲೆಯಲ್ಲಿ ಜಾತಿ ಸಮೀಕ್ಷೆ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಶಿಬಿರದಲ್ಲಿ ಅವರು ಮಾತನಾಡಿದರು.
ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ ಕಾರ್ಯದ ಅಂಗವಾಗಿ ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಒಂದು ಕುಟುಂಬ ಈ ಸಮೀಕ್ಷೆಯಿಂದ ಹೊರಗೆ ಉಳಿಯಬಾರದು. ಪ್ರತಿ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಗಣತಿದಾರರು ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕು ಎಂದರು.
ಮತಗಟ್ಟೆ ಸಂಖ್ಯೆ 28, 29, 30ಕ್ಕೆ ಭೇಟಿ ನೀಡಿ ಸಮೀಕ್ಷೆ ಕಾರ್ಯದ ಬಗ್ಗೆ ಗಣತಿದಾರರಿಂದ ಮಾಹಿತಿ ಪಡೆದುಕೊಂಡರಲ್ಲದೆ, ಪ್ರತಿಶತ 100ರಷ್ಟು ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಆನ್‌ಲೈನ್ ಮೂಲಕವೂ ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದ್ದು, ಸಾರ್ವಜನಿಕರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ತಾಂತ್ರಿಕ ಸಹಾಯಕ ಸಿದ್ದು ಕಾಂಬಳೆ, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ, ಯೋಜನಾಧಿಕಾರಿ ಶ್ರೀನಿವಾಸ ಪವಾರ, ಗಣತಿದಾರರಾದ ಜಿ.ಎಸ್. ಬಿರಾದಾರ, ಮಹಾನಂದಾ ಕುಂಬಾರ, ಬಿ.ಎಸ್. ಗಬ್ಬೂರ ಇದ್ದರು.