ಶಿರಹಟ್ಟಿ: ಪಟ್ಟಣದಿಂದ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ ನಿರ್ವಾಹಕ ಹಾಗೂ ಪ್ರಯಾಣಿಕರ ನಡುವೆ ವಾಗ್ವಾದ ನಡೆದು ಪ್ರಯಾಣಿಕರು ನಿರ್ವಾಹಕ, ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ. ಪಟ್ಟಣದ ಡಬಾಲಿ ಹೈಸ್ಕೂಲ್ ಶಾಲಾ ಮೈದಾನದ ಮುಂದೆ ಘಟನೆ ನಡೆದಿದ್ದು, ಹಲ್ಲೆಯಿಂದ ನಿರ್ವಾಹಕನ ತಲೆ, ಕತ್ತಿನ ಭಾಗಕ್ಕೆ ಮತ್ತು ಎದೆಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ನಿರ್ವಾಹಕನಿಗೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.