ಕೋಟ: ಇತ್ತೀಚೆಗೆ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ, ಉಡುಪಿ ಜಿಲ್ಲೆ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ಕೊಡ ಮಾಡಲ್ಪಟ್ಟ ಜಿಲ್ಲಾಮಟ್ಟದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಭಾಜನರಾಗಿರುವ ಶಾಲೆಯ ಮಹಾಪಾಲಕರು, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಅವರನ್ನು ಮಣೂರು ಪಡುಕರೆ ಸ.ಹಿ.ಪ್ರಾ ಶಾಲೆಯ 2024-25ನೇ ಸಾಲಿನ ಶಾಲಾ ಸಮುದಾಯದತ್ತ ಕಾರ್ಯಕ್ರಮದಲ್ಲಿ ಶಾಲೆಯ ಪರವಾಗಿ ಅಭಿನಂದಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಸಂಯುಕ್ತ ಪ್ರೌಢಶಾಲೆ ಮುಖ್ಯ ಶಿಕ್ಷಕ ವಿವೇಕ್ ಗಾಂವ್ಕರ್, ವಾಹಿನಿ ಯುವಕ ಮಂಡಲ ಅಧ್ಯಕ್ಷ ರಮೇಶ್ ಕುಂದರ್, ಮಾರ್ಗದರ್ಶಿ ಶಿಕ್ಷಕ ಸರ್ವೋತ್ತಮ ನಾಯಕ್, ಶಿಕ್ಷಕರು, ಪಾಲಕರು, ಎಸ್‌ಡಿಎಂಸಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ಹೊಳ್ಳ ಸ್ವಾಗತಿಸಿದರು. ಶಿಕ್ಷಕಿ ಲಲಿತಾ ವಂದನಾರ್ಪಣೆ ಮಾಡಿದರು. ಶಿಕ್ಷಕಿ ನಾಗರತ್ನ ಜಿ. ಕಾರ್ಯಕ್ರಮ ನಿರೂಪಿಸಿದರು.