ಜಿಲ್ಲೆ

ಯೋಧ ಕರುಣಾಕರ ಶೆಟ್ಟಿಗೆ ಅಭಿನಂದನೆ

ಸೌಮ್ಯ ಆರ್

ಉಪ್ಪಿನಂಗಡಿ: ಭಾರತೀಯ ಭೂ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಹುಟ್ಟೂರಿಗೆ ಆಗಮಿಸಿದ ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ನಿವಾಸಿ ಕರುಣಾಕರ ಶೆಟ್ಟಿ ಅವರಿಗೆ ಗೋಳಿತ್ತೊಟ್ಟು ರಾಷ್ಟ್ರ ಭಕ್ತರ ವೇದಿಕೆ ವತಿಯಿಂದ ಅದ್ದೂರಿ ಸ್ವಾಗತ ಹಾಗೂ ಅಭಿನಂದನೆ ನಡೆಯಿತು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ರಾಷ್ಟ್ರ ಭಕ್ತರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಧಾರ್ಮಿಕ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ, ಅಂಬಿಕಾ ಪ್ರಭು ಉಡುಪಿ, ತಾಪಂ ಮಾಜಿ ಸದಸ್ಯೆ ತೇಜಸ್ವಿನಿ ಕಟ್ಟಪುಣಿ, ಮನ್ಮಥ ಶೆಟ್ಟಿ, ತಿರ್ಲೆ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಮಾಧವ ಸರಳಾಯ ಅಭಿನಂದನಾ ನುಡಿಗಳನ್ನಾಡಿದರು.

ಗೊಳಿತ್ತೊಟ್ಟು ಗ್ರಾಪಂ ಅಧ್ಯಕ್ಷೆ ಸವಿತಾ ಪುಳಾರ, ನೆಲ್ಯಾಡಿ ವಲಯ ಬಂಟರ ಸಂಘ ಸಹ ಸಂಚಾಲಕ ಜಯಾನಂದ ಬಂಟ್ರಿಯಾಲ್ ನೆಲ್ಯಾಡಿ, ಗೋಳಿತ್ತೊಟ್ಟು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜಯಂತಿ ಬಿ.ಎಂ., ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ ಕುದ್ಕೋಳಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಅಬ್ದುಲ್ ಹಾರೀಫ್, ಯೋಧ ದೇವಿಪ್ರಸಾದ್ ಮುಗೇರಡ್ಕ, ವಿಶ್ವನಾಥ ಗೌಡ ಪೆರಣ, ಕರುಣಾಕರ ಶೆಟ್ಟಿ ಅವರ ತಂದೆ ಕೃಷ್ಣ ಶೆಟ್ಟಿ, ತಾಯಿ ಸುಂದರಿ, ಪತ್ನಿ ಭಾಗ್ಯಶ್ರೀ ಉಪಸ್ಥಿತರಿದ್ದರು.

ಪುರುಷೋತ್ತಮ ಕುದ್ಕೋಳಿ ಸ್ವಾಗತಿಸಿದರು. ಪುಷ್ಪಾವತಿ ವಂದಿಸಿದರು. ಸುಧೀರ್‌ಕುಮಾರ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು..