ಜಿಲ್ಲೆ

ಮಂತರ್ ಗೌಡಗೆ ಅಭಿನಂದನೆ ಸಲ್ಲಿಸಿದ ಕರವೇ

ಸುನಿಲ್ ಪೊನ್ನೇಟಿ

ಕುಶಾಲನಗರ:

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಶನಿವಾರ ಕುಶಾಲನಗರದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಾಸಕ ಡಾ. ಮಂತರ್ ಗೌಡ ಜತೆ ಮಾತನಾಡಿದ ಕರವೇ ರಾಜ್ಯ ಮಹಿಳಾ ಘಟಕದ ಸಂಚಾಲಕಿ ದೀಪಾ ಪೂಜಾರಿ, ತಮ್ಮ ಸಂಘಟನೆಯಿAದ ಕರ್ನಾಟಕ ಜಾನಪದ ಗ್ರಾಮ ನಿರ್ಮಿಸಲು ತಯಾರಿ ನಡೆಯುತ್ತಿದ್ದು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಎಕರೆ ಜಾಗ ಮಂಜೂರು ಮಾಡಿದೆ.

ಕರ್ನಾಟಕ ಜಾನಪದ ಗ್ರಾಮವನ್ನು ನಿರ್ಮಿಸಲು ಅಂದಾಜು 22 ಕೋಟಿ ರೂ. ವೆಚ್ಚವಾಗುತ್ತದೆ. ಇದಕ್ಕೆ ಶಾಸಕರ ಸಹಕಾರದ ಅಗತ್ಯವಿದೆ ಎಂದರಲ್ಲದೆ, ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳ ಮೇಲೆ ಮತ್ತು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ಕಡ್ಡಾಯವಾಗಿ ಕನ್ನಡದ ನಾಮಫಲಕಗಳನ್ನು ಅಳವಡಿಸಲು ಜಿಲ್ಲಾ ಆಡಳಿತದ ಮೂಲಕ ಆದೇಶ ಮಾಡುವಂತೆ ಶಾಸಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ದಿನೇಶ್, ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ ಹಾಗೂ ಪದಾಧಿಕಾರಿಗಳು ಇದ್ದರು.