ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಆಯ್ಕೆಯಾದ ರೈತ ಸಂಘ-ಕಾಂಗ್ರೆಸ್ ಬೆಂಬಲಿತ 10 ಅಭ್ಯರ್ಥಿಗಳನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಬುಧವಾರ ಅಭಿನಂದಿಸಿದರು. 
ಜಿಲ್ಲೆ

ಸಹಕಾರ ಸಂಘದ ನಿರ್ದೇಶಕರಿಗೆ ಅಭಿನಂದನೆ

ಪಾಂಡವಪುರ: ತಾಲೂಕಿನ ಕ್ಯಾತನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 12 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ಆಯ್ಕೆಯಾದ ರೈತಸಂಘ-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಬುಧವಾರ ಅಭಿನಂದಸಿದರು.

ಚುನಾವಣೆಯಲ್ಲಿ ಆಯ್ಕೆಯಾದ ರೈತಸಂಘ-ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಾದ ಕೆ.ಎಂ.ಕೇಶವ, ಸಿ.ಎಸ್.ದರ್ಶನ್, ಎ.ಗಂಗಾಧರ್, ಚಂದ್ರಶೇಖರ್, ಬಿ.ಕೆ.ಅನಿತಾ, ಗಿರಿಜಾ, ರಂಗಸ್ವಾಮಿ, ಎಂ.ವೆಂಕಟಚಲ, ಮೋಹನ್ ಕುಮಾರ್, ಜೆ.ಹರೀಶ್ ಅವರನ್ನು ಅಭಿನಂದಿಸಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಕ್ಯಾತನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ರೈತಸಂಘ-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳು ಅಭಿವೃದ್ಧಿ ಹೊಂದಿದರ ಮಾತ್ರ ರೈತರು ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಹಾಗಾಗಿ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು ರೈತರು ಹಾಗೂ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸದರು.

ಇದಕ್ಕೂ ಮುನ್ನ ಮಾಜಿ ಶಾಸಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ಥಳಿಗೆ ಮಾರ್ಲಾಪರ್ಣೆ ಮಾಡಿ ನಮನ ಸಲ್ಲಿಸಿದರು. ಸಂದರ್ಭದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ಕೆ.ಎಸ್.ದಯಾನಂದ್, ತಾಪಂ.ಮಾಜಿ ಸದಸ್ಯ ಗೌಡೇಗೌಡ, ಎಣ್ಣೆಹೊಳೆಕೊಪ್ಪಲು ಮಂಜುನಾಥ್, ತುಳಸಿ, ಸೇರಿದಂತೆ ಹಲವರು ಹಾಜರಿದ್ದರು.