ಮಂಡ್ಯ: ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜು.23ರಂದು ರಾಜ್ಯ ಟೈಲರ್ಸ್ ಅಸೋಷಿಯೇಷನ್‌ನ ವಾರ್ಷಿಕೋತ್ಸವ ಹಾಗೂ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಅಸೋಷಿಯೇಷನ್ ಜಿಲ್ಲಾಧ್ಯಕ್ಷ ಟಿ.ಎನ್.ಹರ್ಷ ಪೇಟ್ಕರ್ ತಿಳಿಸಿದರು.
ಅಂದು ಬೆಳಗ್ಗೆ 10ಗಂಟೆಗೆ ಶಾಸಕ ರವಿಕುಮಾರ್ ಗಣಿಗ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧ್ಯಕ್ಷ ಟಿ.ಎನ್.ಹರ್ಷ ಪೇಟ್ಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಂಗ್ರೆಸ್ ಮುಖಂಡ ಡಾ.ಕೃಷ್ಣ ಸಂಘದ ಸದಸ್ಯರಿಗೆ ಕಾರ್ಡ್ ವಿತರಣೆ ಮಾಡಲಿದ್ದು, ಮಂಡ್ಯ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ರುದ್ರಪ್ಪ ಭಾಗವಹಿಸಲಿದ್ದಾರೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಖಜಾಂಚಿ ರಫೀಕ್ ಅಹಮದ್, ಪುನೀತ್, ಸ್ವಾಮಿ, ಉಮೇಶ್, ತಿಮ್ಮೇಗೌಡ, ವಿಜಯಕುಮಾರ್ ಇದ್ದರು.