ಜಿಲ್ಲೆ

ಜ.21ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Mangaluru - Hariprasad Rai


ಮಂಗಳೂರು : ಮಂಗಳೂರಿನಲ್ಲಿ ಜ.21ರಂದು ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಕುರಿತು
ಪೂರ್ವಭಾವಿ ಸಭೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ
ನಿರ್ದೇಶನದಂತೆ ಜ.21 ರಂದು ಪ್ರತೀ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಸಮಾವೇಶವನ್ನು ಮಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ರಾಜ್ಯದ ಸುಮಾರು 1 ಲಕ್ಷ ಪ್ರತಿನಿಧಿಗಳು ಸೇರುವ ನಿರೀಕ್ಷೆ ಇದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೂತ್, ಗ್ರಾಮ, ವಾರ್ಡ್, ಬ್ಲಾಕ್ ಮಟ್ಟದ ಕಾರ್ಯಕರ್ತರು ಅಧಿಕ
ಭಾಗವಹಿಸುವಂತೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿ ವಿವಿಧ ಸಮಿತಿಗಳನ್ನು ರಚಿಸಿದರು.
ಮಾಜಿ ಸಚಿವರಾದ ಬಿ.ರಮಾನಾಥ್ ರೈ , ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕರಾದ ಅಶೋಕ್‌ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ಐವನ್ ಡಿಸೋಜ , ಪ್ರಮುಖರಾದ ಇಬ್ರಾಹಿಂ ಕೋಡಿಜಾಲ್, ಪಿ.ವಿ ಮೋಹನ್, ಮಮತಾ ಗಟ್ಟಿ, ರಕ್ಷಿತ ಶಿವರಾಮ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಯು.ಕೆ ಮೋನು, ಎಂ.ಎ ಗಫೂರ್, ಸದಾಶಿವ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.