ಜಿಲ್ಲೆ

ರಾಜ್ಯ ಅಭಿವೃದ್ಧಿ ಮಾಡುತ್ತಿರುವ ಕಾಂಗ್ರೆಸ್

Mysuru - Desk - Ravikumar

ಹಾಸನ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ಜಿ.ಶಿವಶಂಕರಸ್ವಾಮಿ ತಿಳಿಸಿದರು.


ಅರಸೀಕೆರೆ ತಾಲೂಕಿನ ಬೆಳಗುಂಬ ಹಾಗೂ ಯಡವನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


ಕುಡಿಯುವ ನೀರು, ರಸ್ತೆ, ಶಾಲೆ, ಕಾಲೇಜು ಸೇರಿದಂತೆ ಹತ್ತಾರು ಜನಪರ ಕಾರ್ಯಕ್ರಮಗಳನ್ನು ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಮಾಡಿದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ಮಣಿಸಿ ಕೈ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಅಗತ್ಯವಾಗಿದೆ ಎಂದರು.


ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಮಾತನಾಡಿದರು. ಬೆಳಗುಂಬ ಗ್ರಾಪಂ ಅಧ್ಯಕ್ಷ ತೋಂಟಾರಾಧ್ಯ, ಮುಖಂಡರಾದ ಅಡವಿಸ್ವಾಮಿ, ಬೆಳಗುಂಬ ಬಾಬು, ಧರ್ಮಶೇಖರ್, ಜಯಣ್ಣ, ವೇದಮೂರ್ತಿ, ಸಿದ್ದೇಶ್, ಸ್ವಾಮಿ, ರವಿ ಇದ್ದರು.