ಜಿಲ್ಲೆ

ವಕೀಲರ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ: ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಭರವಸೆ

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದೇವೆ. ಇದಲ್ಲದೆ ಇನ್ನು ಹಲವಾರು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕೀಲರ ಸಂಘದೊಂದಿಗೆ ಚರ್ಚಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

ನಗರದ ವಕೀಲರ ಸಂಘದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಗುರುವಾರ ಮತಯಾಚನೆ ಮಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ವಕೀಲ ಸಮುದಾಯ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.

ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿ, ವಕೀಲರನ್ನು ಭೇಟಿ ಮಾಡಿ ಸಹಾಯ ಮಾಡಿ ಎಂದು ಕೇಳಿದ್ದೇನೆ. ಅವರಿಂದಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾನು ಹೋದ ಕಡೆಯಲೆಲ್ಲ ಬೆಂಬಲ ಚೆನ್ನಾಗಿದೆ. ಹಣ ಇದ್ದರೆ ಮಾತ್ರ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ, ಬದಲಿಗೆ ಜನಬೆಂಬಲವಿರಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಸಿದ್ದರಾಜು, ಹಿರಿಯ ವಕೀಲ ಬಿ.ಬಸವರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ವಕೀಲರಾದ ಸುಂಡಹಳ್ಳಿ ಮಂಜುನಾಥ್, ಗೌರಿಶಂಕರ್ ಇತರರಿದ್ದರು.