ಜಿಲ್ಲೆ

ಸಿಎಂ ಕುರ್ಚಿಗಾಗಿ ಕಾಂಗ್ರೆಸ್​​ನಲ್ಲಿ ಕಚ್ಚಾಟ: ಮಾಜಿ ಸಿಎಂ ಬಿಎಸ್​ವೈ ಲೇವಡಿ

mahalakshmihm

ಬೆಂಗಳೂರು: ಚುನಾವಣೆಗೆ ಮುನ್ನವೇ ಗೆದ್ದು ಅಧಿಕಾರಕ್ಕೆ ಬಂದೇ ಬಿಟ್ಟೆವು ಎಂಬಂತೆ ಕಾಂಗ್ರೆಸ್ ನಲ್ಲಿ‌ ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಟ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.

ಯಲಹಂಕ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರಿಗೆ ಜನ್ಮ ದಿನದ ಶುಭ ಹಾರೈಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಅವರ ಆಸೆ ಫಲಿಸುವುದಿಲ್ಲ ಎಂದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಜನರಿಗೆ ತಿಳಿಸಲು ಸಮಾವೇಶಗಳನ್ನು ಆಯೋಜಿಸುತ್ತಿದ್ದು, ಸಂಘಟನೆ ಬಲಪಡಿಸಲು ಪ್ರವಾಸ ಕೈಗೊಳ್ಳುತ್ತೇವೆ ಎಂದು ಬಿಎಸ್ ವೈ ಹೇಳಿದರು.