ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂದೀಶ್ ಮದಕರಿ, ಸೀತಾರಾಮ ಭರಣ್ಯ, ಮೂರ್ತಿ, ಸತೀಶ್, ಮಧುಕುಮಾರ್ ಮತ್ತಿತರರಿದ್ದರು. 
ಜಿಲ್ಲೆ

ಕಾಂಗ್ರೆಸ್ ಸರ್ಕಾರಕ್ಕೆ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆಯಿಲ್ಲ

ಚಿಕ್ಕಮಗಳೂರು: ಪವಿತ್ರ ರಾಮಾಯಣದ ಮಹಾಕಾವ್ಯವನ್ನು ರಚಿಸುವ ಮೂಲಕ ಹಿಂದೂ ಬಾಂಧವರ ಏಳಿಗೆಗೆ ಅನಾದಿಕಾಲದಲ್ಲಿ ಶ್ರಮಿಸಿದ ಮಹಾ ದಾರ್ಶನಿಕ ಶ್ರೀ ಮಹರ್ಷಿ ವಾಲ್ಮೀಕಿ ಗುರುಗಳು ಎಂದು ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ನಂದೀಶ್ ಮದಕರಿ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಅಂಗವಾಗಿ ಗುರುವಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಹಿಂದೂಗಳ ಪವಿತ್ರ ಗ್ರಂಥ ರಾಮಯಣ ರಚಿಸಿ ವಾಲ್ಮೀಕಿ ಮಹಾಕಾವ್ಯದಲ್ಲಿ ಮನುಷ್ಯ ವ್ಯಕ್ತಿತ್ವ, ಜ್ಞಾನ, ದಾರ್ಶನಿಕರಾಗಿಯೂ, ಸಮಾಜ ಸುಧಾರಕರಾಗಿ ಕಾಣಬಹುದು. ಕುಟುಂಬದಲ್ಲಿ ಹೇಗೆ ಇರಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ರಾಮಾಯಣದ ಸಾರಾಂಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸ್ವAತ ಪರಿಶ್ರಮದ ಮೂಲಕ ರಾಮಾಯಣವೆಂಬ ಮಹಾಕಾವ್ಯ ರಚಿಸಿ ಉನ್ನತ ಸ್ಥಾನಕ್ಕೇರಿದ ವಾಲ್ಮೀಕಿಯರ ಜೀವನ ಶೈಲಿ, ಸಾಧನೆ ಹಾಗೂ ತಳ ಸಮುದಾಯಗಳ ಮಂದಿಗೆ ತೋರಿದ ಸ್ಪೂರ್ತಿಯ ಚಿಲುಮೆ ಮರೆಯವಂಥದ್ದಲ್ಲ. ಹೀಗಾಗಿ ಅವರ ಜೀವನಚರಿತ್ರೆಯೇ ಇಂದಿನ ಯುವಪೀಳಿಗೆಗೆ ದಾರಿದೀಪ ಎಂದು ಬಣ್ಣಿಸಿದರು.
ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಪಂಗಡದ ಜನಾಂಗದ ಅಭಿವೃದ್ಧಿಗೆ ಮೀಸಲಿರಿಸಿದ್ಧ ಅನುದಾನವನ್ನು ರಾಜ್ಯ ಸರ್ಕಾರ ಪಕ್ಷದ ಕಾರ್ಯವೈಖರಿಗೆ ಬಳಸಿಕೊಂಡಿರುವುದು ನಾಚಿಕೇಡಿತನ ಸಂಗತಿ. ಈ ನಡುವೆ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವೇಳೆಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿ ಸಹಕರಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪನೆ, ವಾಲ್ಮೀಕಿ ಜಯಂತಿ ಅಡಿಪಾಯ ಹಾಗೂ ಸಮುದಾಯಕ್ಕೆ ಶೇ. ೩ರಷ್ಟಿದ್ದ ಮೀಸಲಾತಿಯನ್ನು ಶೇ. ೭ಕ್ಕೆ ಏರಿಸಿರುವ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂಬುದನ್ನು ಜನಾಂಗ ಮನಗಾಣಬೇಕು ಎಂದರು.
ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮ ಭರಣ್ಯ ಮಾತನಾಡಿ, ರಾಮಾಯಣ ಮಹಾಕಾವ್ಯದ ವೈಶಿಷ್ಟÈ ಮತ್ತು ಶತಶತಮಾನಗಳಿಂದ ಗಳಿಸಿರುವ ಜನಪ್ರಿಯತೆಯಿಂದಾಗಿ ಕಾವ್ಯದ ಕರ್ತೃ ಮಹರ್ಷಿ ವಾಲ್ಮೀಕಿಯವರು. ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕದಲ್ಲಿ ನಿತ್ಯವೂ ಆರಾಧಿಸಲ್ಪಡುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಮೂರ್ತಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್, ಪ್ರಧಾನ ಕಾರ್ಯದರ್ಶಿಗಳಾದ ಮಧುಕುಮಾರ್, ಶಂಕರ್, ನಗರ ಪ್ರಧಾನ ಕಾರ್ಯದರ್ಶಿ ಯತೀಶ್, ಉಪಾಧ್ಯಕ್ಷ ಭರತ್, ಮುಖಂಡ ಕೇಶವಮೂರ್ತಿ ಉಪಸ್ಥಿತರಿದ್ದರು.