ಕುಷ್ಟಗಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಮಾತನಾಡಿದರು. 
ಜಿಲ್ಲೆ

ಹೈ ಕಮಾಂಡ್ ಒಪ್ಪಿದರೆ ಲೋಕಸಭೆಗೆ ಸ್ಪರ್ಧೆ- ಶಾಸಕ ಅಮರೇಗೌಡ ಬಯ್ಯಪುರ ಇಂಗಿತ

ಕುಷ್ಟಗಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದು, ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಇಂಗಿತ ವ್ಯಕ್ತಪಡಿಸಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ 83 ಸಾವಿರ ಮತದಾರರು ಬೆಂಬಲಿಸಿದ್ದಾರೆ. ಅವರೆಲ್ಲರೂ ಅಭಿಮಾನದಿಂದ ಲೋಕಸಭೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.

ಟಿಕೆಟ್ ನೀಡುವುದು ಪಕ್ಷದ ರಾಜ್ಯಾಧ್ಯಕ್ಷರ ಅಥವಾ ಮುಖ್ಯಮಂತ್ರಿಗಳ ಕೈಯಲ್ಲಿಲ್ಲ. ಅವರು ಪಕ್ಷದ ವರಿಷ್ಟರಿಗೆ ಶಿಫಾರಸು ಮಾಡುತ್ತಾರೆಷ್ಟೆ. ದೆಹಲಿಯಲ್ಲಿರುವ ಪಕ್ಷದ ವರಿಷ್ಟರ ತೀರ್ಮಾನವೇ ಅಂತಿಮ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಯಾವ ಕ್ಷೇತ್ರದಲ್ಲಿ ಪಕ್ಷದ ಶಾಸಕರಿಲ್ಲ. ಅಂತಹ ಕ್ಷೇತ್ರಗಳ ಆಕಾಂಕ್ಷಿಗಳಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡುವ ಸಾಧ್ಯತೆ ಕುರಿತು ಪಕ್ಷದಲ್ಲಿ ಚರ್ಚೆ ನಡೆದಿದೆ.

ಬಯ್ಯಪುರ ಸ್ಪರ್ಧಿಸಿದರೆ ಪಕ್ಷದ ಎಲ್ಲರೂ ಒಂದಾಗಿ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ಮಾಜಿ ಶಾಸಕ ಹಸನ್‌ಸಾಬ್ ದೋಟಿಹಾಳ, ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟಡೀಲ್ ಬಯ್ಯಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ನಾಲತ್ವಾಡ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ್, ಪ್ರಧಾನ ಕಾರ್ಯದರ್ಶಿ ಶಾರದಾ ಕಟ್ಟಿಮನಿ, ತಾಲೂಕು ಅಧ್ಯಕ್ಷೆ ಶಕುಂತಲಾ ಹಿರೇಮಠ ಇತರರು ಇದ್ದರು.