ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿದ್ದರು. ಅವರ ಆಡಳಿತ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷಿ$್ಮ ಹೆಬ್ಬಾಳಕರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿರಾ ಗಾಂಧಿ ನಮಗೆಲ್ಲಾ ಆದರ್ಶ. ನನ್ನಂತಹ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ ಎಂದರು.
ಇಂದಿರಾಗಾಂಧಿ ನೇತೃತ್ವದಲ್ಲಿ ಭಾರತವು ಅಂತರಾಷ್ಟ್ರೀಯ ಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿತು. ದೇಶದ ಸ್ವಾವಲಂಬನೆಗಾಗಿ ಬ್ಯಾಂಕ್ ಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿ ಸೇರಿದಂತೆ ಅನೇಕ ಆರ್ಥಿಕ ಮತ್ತು ಸಾಂಸತಿಕ ಸುಧಾರಣೆಗಳನ್ನು ತಂದಿದ್ದರು. ಒಂದು ಹೊತ್ತು ಊಟ ಮಾಡಲು ಕಷ್ಟ ಪಡುತ್ತಿದ್ದ ಕಾಲದಲ್ಲಿ ಭಾರತವನ್ನು ಮುನ್ನಡೆಸಿದ್ದರು. ತ್ಯಾಗ ಬಲಿದಾನಕ್ಕೆ ಹೆಸರಾದ ಮಹಿಳೆ ಎಂದು ಹೇಳಿದರು.
ಪಟೇಲ್ ಅದರ್ಶ ಪುರುಷ
ರಾಜಾಡಳಿತದಲ್ಲಿ ಹಂಚಿ ಹೋಗಿದ್ದ ಭಾರತವನ್ನು ಒಂದುಗೂಡಿಸಿದ ಕೀರ್ತಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ. ಅಖಂಡ ಭಾರತ ನಿಮಾರ್ಣದಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯೆ ಜ್ಯೋತಿ ಹೆಬ್ಬಾರ್, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.