ನೆಲಮಂಗಲ : ಕಾಂಗ್ರೆಸ್ನ ಜವಾಬ್ದಾರಿ ಹೊತ್ತಿರುವ ನೂತನ ಬ್ಲಾಕ್ ಅಧ್ಯಕ್ಷರು ಪಕ್ಷ ಸಂಟನೆಗೆ ಒತ್ತು ನೀಡುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಬೇಕು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈಲನಹಳ್ಳಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ನಾಲ್ಕು ಬ್ಲಾಕ್ ಅಧ್ಯಕ್ಷರ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ೇತ್ರದಲ್ಲಿ ಕಾಂಗ್ರೆಸ್ ಅತ್ಯಂತ ಪ್ರಬಲವಾಗಿದೆ. ತಳಮಟ್ಟದಿಂದ ಕಾರ್ಯಕರ್ತರನ್ನು ಒಗ್ಗೂಡಿಸಿಬೇಕು. ಸರ್ಕಾರದ ಸಾಧನೆ ಜನಸಾಮಾನ್ಯರಿಗೆ ಅರ್ಥಮಾಡಿಸಬೇಕಿದೆ. ಆಂತರಿಕ ಕಲಹಗಳನ್ನು ಮರೆತು ಪಕ್ಷ ಕಟ್ಟಲು ಮುಂದಾದವರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು ಎಂದರು. ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ ಮಾತನಾಡಿ, ಪಕ್ಷದ ಹೊಣೆಗಾರಿಕೆ ಎಂದರೇ ಪಕ್ಷ ಕಟ್ಟುವ ಕಾಯಕವಾಗಿದೆ. ಹುದ್ದೆಗೆ ನ್ಯಾಯ ಒದಗಿಸಬೇಕು ಎಂದರು. ನೆ.ಯೋ.ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ನಾಗರಾಜು, ಸದಸ್ಯ ಬಿನ್ನಮಂಗಲವೆಂಕಟೇಶ್, ನಿಟಕಪೂರ್ವ ಅಧ್ಯಕ್ಷ ಎಂ.ನಾರಾಯಣ್ಗೌಡ, ಮಾಜಿ ಸದಸ್ಯ ಬಿ.ಜಿ.ವಾಸು, ಬಿಎಂಟಿಸಿ ಮಾಜಿ ನಿರ್ದೇಶಕ ಮಿಲಿಟರಿ ಮೂರ್ತಿ, ನಗರಸಭೆ ಉಪಾಧ್ಯಕ್ಷ ಆನಂದ್, ಗ್ರಾಪಂ ಸದಸ್ಯ ರಾಜಶೇಖರಯ್ಯ, ಜಗದಾಂಬಪುಟ್ಟಸ್ವಾಮಿ, ಮಂಜುನಾಥಯ್ಯ, ಮಾಜಿ ಅಧ್ಯಕ್ಷ ಅಂಜನಮೂರ್ತಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಎಂ.ಗೌಡ, ವಕೀಲ ಮೋಹನ್ಕುಮಾರ್ ಇತರರು ಇದ್ದರು.
ಬೂತ್ಮಟ್ಟದಲ್ಲಿ ಪಕ್ಷ ಸಂಟನೆ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಕ್ಷೇತ್ರದಲ್ಲಿ ತಾಲೂಕಿನ 27 ಗ್ರಾಪಂ ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲಾಗವುದು. ಬೂತ್ ಸಮಿತಿಯಲ್ಲಿ ಮಹಿಳೆಯರಿಗೂ ಆದ್ಯತೆ ನೀಡಬೇಕು. ಪ್ರತಿ ಗ್ರಾಪಂ ಮಟ್ಟದಲ್ಲಿ ಬೂತ್ ಸಮಿತಿ ರಚಿಸಿ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಕರೆದೊಯ್ದು ಗ್ರಾಮಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ನೇಮಕಾತಿ ಪತ್ರ ವಿತರಣೆ : ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮೈಲನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನಗರದ ಬ್ಲಾಕ್ ಅಧ್ಯಕ್ಷ ಸಿ.ಪ್ರದಿಪ್, ಕಸಬಾ ಬ್ಲಾಕ್ ಅಧ್ಯಕ್ಷ ಬೂದಿಹಾಲ್ ಮಂಜುನಾಥ್, ತ್ಯಾಮಗೊಂಡ್ಲು ಬ್ಲಾಕ್ ಅಧ್ಯಕ್ಷ ಹನುಮಂತೇಗೌಡ, ಸೋಂಪುರ ಹಾಗೂ ಸೋಲೂರು ಬ್ಲಾಕ್ ಅಧ್ಯಕ್ಷ ಶರ್ಮಾ ಸೇರಿ ಕೆಪಿಸಿಸಿ ಸದಸ್ಯ ಪ್ರಕಾಶ್ಬಾಬು ಅವರಿಗೆ ನೇಮಕಾತಿ ಪತ್ರ ನೀಡಲಾಯಿತು.
ಅದ್ದೂರಿ ಪದಗ್ರಹಣ : ನವರಾತ್ರಿ ಶುಭದಿನದಂದು ನೇಮಕಾತಿ ಪತ್ರ ನೀಡಲಾಗಿದೆ. ಆದಷ್ಟು ಬೇಗ ತಾಲೂಕಿನಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ಆಯೋಜನೆ ಮಾಡಿ ಬ್ಲಾಕ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ಮಾಹಿತಿ ನೀಡಿದರು.