ಜಿಲ್ಲೆ

ಕಾಂಗ್ರೆಸ್​ ಮುಖಂಡ ದಿನೇಶ್​ ಗುಂಡೂರಾವ್ ತಾಯಿ ವರಲಕ್ಷ್ಮಿ ಗುಂಡೂರಾವ್ ವಿಧಿವಶ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಪತ್ನಿ ಹಾಗೂ ಕಾಂಗ್ರೆಸ್​ ಮುಖಂಡ ದಿನೇಶ್ ಗುಂಡೂರಾವ್​ ತಾಯಿ ವರಲಕ್ಷ್ಮಿ ಗುಂಡೂರಾವ್ (80) ಅವರು ವಿಧಿವಶರಾಗಿದ್ದಾರೆ.

ಮೃತರ ಅಂತ್ಯಕ್ರಿಯೆಯು ಬ್ರಾಹ್ಮಣ ಸಂಪ್ರದಾಯದಂತೆ ನವರತ್ನ ಅಗ್ರಹಾರ ಬಳಿಯ ತೋಟದಲ್ಲಿ ಬುಧವಾರ (ಜ.6) ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಕುಟುಂಬಸ್ಥರು, ಗಣ್ಯರಿಗೆ ಮಾತ್ರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವ ಸಂಬಂಧಿಕರಿಗಾಗಿ ಪೆಂಡಲ್ ಮತ್ತು ಚೇರಿನ ವ್ಯವಸ್ಥೆ ಮಾಡಲಾಗಿದೆ. ಕಳೆದ ರಾತ್ರಿಯೆ ಮೃತದೇಹವನ್ನು ತೋಟಕ್ಕೆ ತರಲಾಗಿದೆ. ತೋಟವು ಬೆಂಗಳೂರು ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿಯಿದೆ.

ವರಲಕ್ಷ್ಮಿ ಅವರ ಸಾವಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಸಂತಾಪ ಸೂಚಿಸಿದ್ದಾರೆ. ವರಲಕ್ಷ್ಮೀ ಅವರ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಇಂತಹ ದುಃಖದ ಸಮಯಲ್ಲಿ ಗುಂಡೂರಾವ್​ ಕುಟುಂಬಕ್ಕೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.