ಜಿಲ್ಲೆ

ಮಾಜಿ ಸಂಸದ ಮುದ್ದಹನುಮೇಗೌಡರ ಆಪ್ತನ ಮನೆ ಮೇಲೆ ಐಟಿ ದಾಳಿ

chandru

ತುಮಕೂರು: ಗುತ್ತಿಗೆದಾರ ಹಾಗೂ ಕಾಂಗ್ರೆಸ್​ ಮುಖಂಡ ರಾಯಸಂದ್ರ ರವಿ ಕುಮಾರ್​ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತುಮಕೂರು ನಗರದ ಎಸ್ಐಟಿ ಹಿಂದಿನ ಗೇಟ್ ಬಳಿ ಇರುವ ಅವರ ನಿವಾಸ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೋಮವಾರ ಮಧ್ಯಾಹ್ನದಿಂದ ರಾತ್ರಿ 11 ಗಂಟೆವರೆಗೂ ದಾಖಲೆಗಳನ್ನು ಪರಿಶೀಲನೆ ನಡೆಸಿತು.

ರಾಯಸಂದ್ರ ರವಿ ಮಾಜಿ ಸಂಸದ ಮುದ್ದಹನುಮೇಗೌಡರ ಅವರ ಆಪ್ತ ಎಂದು ತಿಳಿದು ಬಂದಿದೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮನೆಗೆ ಬಂದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ ಪ್ರಮಾಣದ ಪತ್ರದ ಆಧಾರದ ಮೇಲೆ ಪರಿಶೀಲನೆ ನಡೆಯುತ್ತಿದೆ. ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸುತ್ತೇನೆ ಎಂದು ಗುತ್ತಿಗೆದಾರ ರಾಯಸಂದ್ರ ರವಿಕುಮಾರ್​ ತಿಳಿಸಿದರು. (ದಿಗ್ವಿಜಯ ನ್ಯೂಸ್​)