ಜಿಲ್ಲೆ

ಕರೊನಾದಿಂದ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಹೆಬ್ಬಾರ್ ಮೃತ

Chikkamagaluru

ಕಳಸ: ಕಳಸ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟದೂರು ಶ್ರೀನಿವಾಸ್ ಹೆಬ್ಬಾರ್(54) ಕರೊನಾದಿಂದ ಮೃತಪಟ್ಟಿದ್ದಾರೆ. ಒಂದು ತಿಂಗಳ ಹಿಂದೆ ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ ಮೃತರಾಗಿದ್ದಾರೆ. 50 ದಿನಗಳ ಹಿಂದೆ ಅವರ ತಂದೆ ಶ್ಯಾಮಣ್ಣ ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದರು. ಶ್ರೀನಿವಾಸ್ ಹೆಬ್ಬಾರ್ ಪ್ರಸ್ತುತ ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ ರೋಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆ, ಧಾರ್ವಿುಕ ಕ್ಷೇತ್ರ, ಕನ್ನಡ ಸಾಹಿತ್ಯ ಪರಿಷತ್, ಕ್ರೀಡಾ ಕ್ಷೇತ್ರಕ್ಕೆ ಸಹಾಯಹಸ್ತ ಚಾಚಿದ್ದರು. ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.