ಪ
ಕಾರವಾರ: ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ಕೃತ್ಯವನ್ನು ಬಯಲಿಗೆಳೆಯುವ ಮೂಲಕ ಕಾಂಗ್ರೆಸ್ ಶಾಸಕರು ತಮ್ಮ ಘಟ್ಟಿತನ ಪ್ರದರ್ಶಿಸಿದ್ದಾರೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಅಂಕೋಲಾದಲ್ಲಿ ಅವರು ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತಮಾಡಿದರು.
ಯಾವುದೇ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಗ್ಯಾರಂಟಿಗಳು ಮನೆ, ಮನೆಗೆ ತಲುಪಿರುವುದರಿಂದ ಆತಂಕಿತರಾಗಿರುವ ಬಿಜೆಪಿ ಇಂಥ ಕಾರ್ಯ ಮಾಡುತ್ತಿದೆ ಎಂದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಒಳ್ಳೆಯ ಹೋಸ್ಟ್ ಅವರು ಆಗಾಗ ತಮ್ಮ ಮನೆಗೆ ಔತಣಕ್ಕೆ ಎಲ್ಲರನ್ನೂ ಆಹ್ವಾನಿಸುತ್ತಾರೆ
ಅದೇ ರೀತಿ ಮೊನ್ನೆ ಆಹ್ವಾನಿಸಿದ್ದರು. ಸಿಎಂ ಸಿದ್ದರಾಮಯ್ಯ ಸೇರಿ ಇತರ ಸಚಿವರು ಭಾಗಿಯಾಗಿದ್ದರು. ಅದರಲ್ಲಿ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು. ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ, ಅದನ್ನು ಮಾಧ್ಯಮದ ಎದುರು ಹೇಳುವುದು ಸರಿಯಲ್ಲ. ಈ ಬಗ್ಗೆ ನಮ್ಮ ಸಹೋದ್ಯೋಗಿಗಳಿಗೂ ಮನವಿ ಮಾಡಿಕೊಳ್ಳುತ್ತೇನೆ ಎಂದರು.