ಪ್ರಭಾ ಶುಗರ್ಸ್‌ ಬಳಿ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭೆ ಉಪಚುನಾವಣೆ ಪ್ರಚಾರ ಸಭೆಯನ್ನು ಗಣ್ಯರು ಉದ್ಘಾಟಿಸಿದರು. ಜಗದೀಶ ಶೆಟ್ಟರ್, ಭೈರತಿ ಬಸವರಾಜ, ಉಮೇಶ ಕತ್ತಿ ಇತರರು ಇದ್ದರು. 
ಜಿಲ್ಲೆ

ಕಾಂಗ್ರೆಸ್ ಪಕ್ಷ ಉದ್ಧಾರವಾಗದು

ಗೋಕಾಕ: ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಹತಾಶ ಮನೋಭಾವನೆಯಿಂದ ಚಿಲ್ಲರೆ ರಾಜಕಾರಣ ಮಾಡುವ ಮೂಲಕ ತನ್ನ ಅಧೋಗತಿಗೆ ತಾನೇ ಮುಂದಾಗುತ್ತಿದೆ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದರು.

ಸಮೀಪದ ಪ್ರಭಾ ಶುಗರ್ಸ್‌ ಹತ್ತಿರದ ಬಸವೇಶ್ವರ ಸಭಾಭವನದಲ್ಲಿ ಸೋಮವಾರ ಜರುಗಿದ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರ ಪ್ರಚಾರಾರ್ಥ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಡಿ.ಕೆ.ಶಿವಕುಮಾರ ಸಿಡಿಯಂತಹ ಚಿಲ್ಲರೆ ರಾಜಕಾರಣ ಮಾಡಿದರೆ ಕಾಂಗ್ರೆಸ್ ಪಕ್ಷ ಉದ್ಧಾರವಾಗುವುದಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಬಿಜೆಪಿಗೆ ಮತದಾನ ಮಾಡುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿ ಕನಕಪುರ ಬಂಡೆ ಒಡೆದು ಹಾಕುತ್ತೇವೆ ಎಂಬ ಸಂದೇಶವನ್ನು ರಾಜ್ಯಕ್ಕೆ ನೀಡುವಂತೆ ಕೋರಿದರು. ಆಹಾರ ಮತ್ತು ನಾಗರಿಕ ಸಚಿವ ಉಮೇಶ ಕತ್ತಿ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಸಂಸದ ಅಪ್ಪಾಸಾಹೇಬ ಜೊಲ್ಲೆ, ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ, ಲಕ್ಷ್ಮಣ ಉಪ್ಪಾರ ಮಾತನಾಡಿದರು. ಸಚಿವ ಬೈರತಿ ಬಸವರಾಜ ಅಭ್ಯರ್ಥಿ ಮಂಗಲ ಅಂಗಡಿ, ಮಾಜಿ ಶಾಸಕ ಎಂ.ಎಲ್.ಮುತ್ತೆಣ್ಣವರ, ಬಸವರಾಜ ಯಂಕಂಚಿ, ಜಯಾನಂದ ಹುಣಶ್ಯಾಳ, ಜಯಾನಂದ ಮುನವಳ್ಳಿ, ಶಾಮಾನಂದ ಪೂಜೇರಿ, ಮಹಾಂತೇಶ ತಾವಂಶಿ, ಎಸ್.ವಿ.ದೇಮಶೆಟ್ಟಿ, ಸುರೇಶ ಪಾಟೀಲ ಉಪಸ್ಥಿತರಿದ್ದರು.