Congress preliminary meeting tomorrow 
ಜಿಲ್ಲೆ

ಕಾಂಗ್ರೆಸ್ ಪೂರ್ವಭಾವಿ ಸಭೆ ನಾಳೆ

ಗಿರೀಶ ಸಗರ

ಮುದ್ದೇಬಿಹಾಳ: ಕಾಂಗ್ರೆಸ್‌ನ ಎಲ್ಲ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಸ್ಥಳೀಯ ಸಂಸ್ಥೆ, ಎಪಿಎಂಸಿ, ಪಿಕೆಪಿಎಸ್‌ಗಳ ಹಾಲಿ ಮತ್ತು ಮಾಜಿ ಸದಸ್ಯರ ಪೂರ್ವಭಾವಿ ಸಭೆಯನ್ನು ಜ. 24 ರಂದು ಬೆಳಗ್ಗೆ 11 ಗಂಟೆಗೆ ಆಲಮಟ್ಟಿ ರಸ್ತೆ ಪಕ್ಕದಲ್ಲಿರುವ ಮದರಿ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ.

ಶಾಸಕ ಸಿ.ಎಸ್. ನಾಡಗೌಡ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಫೆ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸುವ ಕುರಿತು ಚರ್ಚಿಸಲಾಗುತ್ತದೆ.

ಮುಂಬರುವ ಲೋಕಸಭೆ, ಜಿಪಂ ಮತ್ತು ತಾಪಂ ಚುನಾವಣೆಗಳ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಲಾಗುತ್ತದೆ.

ಪಕ್ಷದ ಎಲ್ಲ ಹಂತದವರೂ ಪಾಲ್ಗೊಂಡು ಸಲಹೆ ಸೂಚನೆ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.