ಜಿಲ್ಲೆ

ಥೀಮ್ ಪಾರ್ಕ್ ಹಗರಣ, ಬೆಂಗಳೂರಲ್ಲಿ ಕೈ ಪಡೆ ಪ್ರತಿಭಟನೆ

Avinash R

ವಿಜಯವಾಣಿ ಸುದ್ದಿಜಾಲ ಉಡುಪಿ: ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಹಗರಣ ಖಂಡಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ನಾಯಕ ಮುನಿಯಾಲು ಉದಯ್ ಶೆಟ್ಟಿ ನೇತೃತ್ವದಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವು ನಾಯಕರು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡು, ಕಾರ್ಕಳ ಶಾಸಕ ಸುನೀಲ್‌ಕುವಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಪ್ರತಿಭಟನಾಕಾರರು ವಿಧಾನಸೌಧಕ್ಕೆ ತೆರಳಿ, ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಿರ್ವಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ವಾಣದ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್, ವಿಪ ಸದಸ್ಯರಾದ ಮಂಜುನಾಥ್ ಭಂಡಾರಿ ಐವನ್ ಡಿಸೋಜಾ, ವಾಜಿ ಸಚಿವರಾದ ರವಾನಾಥ್ ರೈ, ವಿನಯ್‌ಕುವಾರ್ ಸೊರಕೆ, ವಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುವಾರ್ ಕೊಡವೂರು, ಮುಖಂಡರಾದ ಮಿಥುನ್ ರೈ, ಎಂ.ಎ.ಗಫೂರ್, ಸುಧೀರ್‌ಕುವಾರ್ ಮುರೊಳ್ಳಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಹರೀಶ್ ಕುವಾರ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಮುರಳಿ ಶೆಟ್ಟಿ, ಸುರೇಂದ್ರ ಶೆಟ್ಟಿ, ಶುಭಧ್ ರಾವ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ರಮೇಶ್ ಕಾಂಚನ್, ದಿನಕರ್ ಹೇರೂರು ಇನ್ನಿತರರು ಉಪಸ್ಥಿತರಿದ್ದರು.