ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಮಹಿಳಾ ಕಾಂಗ್ರೆಸ್ ವತಿಯಿಂದ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಬಿ.ಸಿ.ರೋಡ್‌ನ ಆಡಳಿತ ಸೌಧ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸರ್ಕಾರ ಜನವಿರೋಧಿ ಆಡಳಿತದ ಮೂಲಕ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿವೆ. ಆಡಳಿತ ನಡೆಸುವ ಕೇಂದ್ರ ಹಾಗೂ ರಾಜ್ಯದ ಡಬಲ್ ಇಂಜಿನ್ ಸರ್ಕಾರ ಬೆಲೆ ಏರಿಕೆ ಮಾಡಿದೆಯೇ ಹೊರತು ಜನರ ನೋವು ಅರಿತಿಲ್ಲ. ನಿರಂತರ ಬೆಲೆ ಏರಿಕೆಯಿಂದ ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಉಪಾಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪಾಣೆಮಂಗಳೂರು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಪ್ರಮುಖರಾದ ಜಾಸ್ಮಿನ್ ಡಿಸೋಜ, ಐಡಾ ಸುರೇಶ್, ಮಂಜುಳಾ ಕುಶಲ ಪೆರಾಜೆ, ಸಪ್ನಾ ವಿಶ್ವನಾಥ ಪೂಜಾರಿ, ಧನಲಕ್ಷ್ಮೀ ಸಿ.ಬಂಗೇರ, ಪ್ಲೋಸಿ ಡಿಸೋಜ, ನಸೀಮಾ ಬೇಗಂ, ಅಸ್ಮಾ ಅಜೀಜ್, ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಪ್, ಉಪಾಧ್ಯಕ್ಷೆ ಜೆಸಿಂತಾ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಅಬ್ಬಾಸ್ ಅಲಿ, ಲೋಲಾಕ್ಷ ಶೆಟ್ಟಿ, ಶೀಲಾ ವೇಗಸ್, ಪರಮೇಶ್ವರ ಮೂಲ್ಯ, ವಾಸು ಪೂಜಾರಿ, ವೆಂಕಪ್ಪ ಪೂಜಾರಿ, ಪ್ರಶಾಂತ್ ಕುಲಾಲ್, ರೋಶನ್ ರೈ, ಸದಾನಂದ ಶೆಟ್ಟಿ, ಗಂಗಾದರ ಪೂಜಾರಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ಪಕ್ಷ ಜನರಿಗೆ ಬದುಕುವುದನ್ನು ಕಲಿಸಿತ್ತು. ಆದರೆ ಬಿಜೆಪಿ ಜನರ ಬದುಕನ್ನು ಕಸಿದುಕೊಂಡಿದೆ. ನಿರಂತರ ಬೆಲೆ ಏರಿಕೆಯಿಂದ ಜನರ ಜೀವನ ಕಷ್ಟವಾಗುತ್ತಿದೆ. | ಮಮತಾ ಗಟ್ಟಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ