ಉಡುಪಿ: ಜವಹರ್ ಲಾಲ್ ನೆಹರೂ ಅವರು ಸ್ವಾತಂತ್ರ$್ಯ ಸಂಗ್ರಾಮ ಕಾಲದಲ್ಲಿ ಜನರಿಗೆ ಸತ್ಯ ಸಂಗತಿ ತಿಳಿಸಲು ತನ್ನ ಸಂಪತ್ತು ಅಡಮಾನವಿಟ್ಟು ನ್ಯಾಶನಲ್ ಹೆರಾಲ್ಡ್ ಪತ್ರಿಕೆ ಪ್ರಾರಂಭಿಸಿದ್ದರು. ಕೇಂದ್ರ ಸರ್ಕಾರ ಗಾಂಧಿ ಕುಟುಂಬದ ವಿರುದ್ಧ ಕ್ಷುಲ್ಲಕ ಆರೋಪಗಳನ್ನು ಹೊರಿಸಿ ಜೈಲಿಗೆ ಕಳುಹಿಸುವ ಹುನ್ನಾರ ನಡೆಸುತ್ತಿದೆ. ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆಕ್ರೋಶವ್ಯಕ್ತಪಡಿಸಿದರು.
ಆದಿಉಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಇಡಿ, ಸಿಬಿಐ ಮೊದಲಾದ ಕೇಂದ್ರೀಯ ಸಂಸ್ಥೆಗಳ ಮೂಲಕ ವಿರೋಧಪಕ್ಷದ ನಾಯಕರ ಕೈ ಕಟ್ಟಿಹಾಕುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ನಾಯಕ ಅಶೋಕ್ ಚೌಹಾಣ್, ಮಾಜಿ ಕೇಂದ್ರ ಸಚಿವ ಪ್ರುಲ್ ಪಟೇಲ್ ವಿರುದ್ಧ ಇಡಿ ಕೇಸು ದಾಖಲಿಸಿದ್ದರೂ ಅವರು ಬಿಜೆಪಿ ಸೇರಿದ ಬಳಿಕ ವಿಚಾರಣೆ ಸ್ಥಗಿತಗೊಳಿಸಿದೆ. ಪಕ್ಷದ ಕಠಿಣ ಸನ್ನಿವೇಶದಲ್ಲಿ ಕಾರ್ಯಕರ್ತರು ಒಟ್ಟಾಗಿ ಹೋರಾಟ ನಡೆಸಬೇಕು ಎಂದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಎಂ.ಏ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್, ಶುಭದ್ ರಾವ್, ಗೋಪಿನಾಥ್ ಭಟ್, ಅರವಿಂದ್ ಪೂಜಾರಿ, ಪ್ರದಿಪ್ ಶೆಟ್ಟಿ, ನವೀನ್ ಚಂದ್ರ ಸುವರ್ಣ, ರಾಘವೇಂದ್ರ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಪಕ್ಷದ ನಾಯಕರಾದ ರಾಜು ಪೂಜಾರಿ, ಮುರಳಿ ಶೆಟ್ಟಿ, ದಿನೇಶ್ ಪುತ್ರನ್, ಹರೀಶ್ ಕಿಣಿ, ಭುಜಂಗ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ಫಾದರ್ ವಿಲಿಯಮ್ ಮಾರ್ಟಿಸ್, ಸದಾಶಿವ ಕಟ್ಟೆಗುಡ್ಡೆ, ಮಹಾಬಲ ಕುಂದರ್, ಕೃಷ್ಣ ಶೆಟ್ಟಿ ಬಜಗೋಳಿ, ವಿಶ್ವಾಸ್ ಅಮೀನ್, ಡಾ. ಸುನಿತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಮೀನಾಕ್ಷಿ ಮಾಧವ ಬನ್ನಂಜೆ, ರೋಶ್ನಿ ಒಲಿವರ್, ಸತೀಶ್ ಕೊಡವೂರು, ಸಂಧ್ಯಾ ತಿಲಕ್ರಾಜ್ ಮೊದಲಾದವರು ಉಪಸ್ಥಿತರಿದ್ದರು.