ಜಿಲ್ಲೆ

ಸುಳ್ಳು, ಅಪಪ್ರಚಾರವೇ ಬಿಜೆಪಿ ಜೀವಾಳ : ಕಾಂಗ್ರೆಸ್ ಜನಜಾಗೃತಿ ಸಭೆಯಲ್ಲಿ ಪದ್ಮರಾಜ್ ಆರೋಪ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ

ಸುಳ್ಳು ಮತ್ತು ಅಪಪ್ರಚಾರವೇ ಬಿಜೆಪಿಯ ಜೀವಾಳ. ಸತ್ಯವನ್ನು ಸುಳ್ಳು ಮಾಡುವುದು, ಸುಳ್ಳನ್ನು ಸತ್ಯ ಮಾಡುವುದು ಬಿಜೆಪಿಗರ ಕೆಲಸ. ಬಿಜೆಪಿಯವರು ಹೇಳುತ್ತಿರುವ ಸುಳ್ಳುಗಳಿಗೆ ಕಾಂಗ್ರೆಸ್ ದಿಟ್ಟ ಉತ್ತರ ನೀಡಬೇಕಾದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಹೇಳಿದರು.

ಒಳಮೊಗ್ರು ಗ್ರಾಮದ ಕುಂಬ್ರ ಜಂಕ್ಷನ್ ಬಳಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಒಳಮೊಗ್ರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ನಡೆದ ‘ಬಿಜೆಪಿಯ ಸುಳ್ಳಿಗೆ ಕಾಂಗ್ರೆಸ್ ಉತ್ತರ’ ಕಾಂಗ್ರೆಸ್ ಜನಜಾಗೃತಿ ಸಭೆಯಲ್ಲಿ ಮಾತನಾಡಿದರು.

ಶಾಸಕ ಅಶೋಕ್‌ಕುಮಾರ್ ರೈ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಅಮಳ ರಾಮಚಂದ್ರ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಪ್ರತಿನಿಧಿ ಶಶಿಕಿರಣ್ ರೈ ನೂಜಿಬೈಲು ಮಾತನಾಡಿದರು.

ಕೆಪಿಸಿಸಿ ಸದಸ್ಯ ಪ್ರಸಾದ್ ಕೌಶಲ್ ಶೆಟ್ಟಿ, ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ಚಂದ್ರಪ್ರಭಾ ಗೌಡ, ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಮತ್ತಿತರರಿದ್ದರು. ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ ಸ್ವಾಗತಿಸಿದರು. ಕಾಂಗ್ರೆಸ್ ಮುಖಂಡ ಸಂತೋಷ್ ಭಂಡಾರಿ ಚಿಲ್ಮೆತ್ತಾರು ವಂದಿಸಿದರು.

ಬಿಜೆಪಿಗರ ಸುಳ್ಳುಗಳಿಗೆ ಯಾರೂ ಬಲಿಯಾಗದೆ ಅಭಿವೃದ್ಧಿ ವಿಚಾರದಲ್ಲಿ ನಾವೆಲ್ಲರೂ ಜತೆಯಾಗಿ ಕೆಲಸ ಮಾಡಬೇಕಿದೆ. ನಮಗೆ ಪುತ್ತೂರಿನ ಅಭಿವೃದ್ಧಿಯೊಂದೇ ಮುಖ್ಯ. ಅಶೋಕ್‌ಕುಮಾರ್ ರೈ, ಶಾಸಕ