Oplus_16908288 
ಜಿಲ್ಲೆ

ಕಾಂಗ್ರೆಸ್ ಸರ್ಕಾರ ಭರವಸೆಗಳನ್ನು ಈಡೇರಿಸಿದೆ

ಎ. ಆರ್. ರಘುರಾಮ
 ನಂಜನಗೂಡು :  ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಬಳಿಕ ರಾಜ್ಯದ ಜನರಿಗೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ, ಪುಷ್ಪ ಅಮರನಾಥ್ ಹೇಳಿದರು.
 ಹುಣ್ಣಿಮೆ ಹಿನ್ನೆಲೆಯಲ್ಲಿ ಮಂಗಳವಾರ  ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಕುಟುಂಬ ಸಮೇತ ಆಗಮಿಸಿ, ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದು  ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ಗ್ರಹಗಳಿಗೆ ಪ್ರದಕ್ಷಿಣೆ ಹಾಕಿ  ಮಾತನಾಡಿ,
ಮುಂದಿನ ರಾಜಕೀಯ ಬಗ್ಗೆ ನಾನು ಯೋಚನೆ ಮಾಡಿಲ್ಲ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ರನ್ನಾಗಿ  ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಂಜುಂಡೇಶ್ವರ ಸ್ವಾಮಿ  ಮನೆದೇವರಾಗಿದ್ದು, ಸನ್ನಿಧಿಗೆ ಬಂದಿದ್ದೇನೆ. ಆದರೆ ದೇವಾಲಯದ ಸನ್ನಿಧಿಯಲ್ಲಿ  ರಾಜಕೀಯ ಮಾತನಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನೀಡಿದ್ದೇವೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ , ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಇಂದು ದೇವಸ್ಥಾನದಲ್ಲಿ ನೋಡಿದಾಗ ಹೆಚ್ಚಿನ ಸಂಖ್ಯೆಯಲ್ಲಿ ಉಚಿತವಾಗಿ ಮಹಿಳೆಯರು ಆಗಮಿಸಿ , ದೇವರ ದರ್ಶನವನ್ನ ಪಡೆಯುತ್ತಿರುವುದು ಸಂತಸದ ವಿಷಯವಾಗಿದೆ. ಗ್ಯಾರಂಟಿ ಯೋಜನೆಗಳು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರ ಖಾತೆಗೆ ಹಣ ಬಂದರೆ ಕುಟುಂಬದ ನಿರ್ವಹಣೆಗೆ  ಒತ್ತಡ ಕಡಿಮೆಯಾಗುತ್ತದೆ. ಮಹಿಳೆಯರು ಸ್ವಾವಲಂಬಿಯಾಗಿ ನಿಲ್ಲಲು ಸಹಕಾರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ, ಗ್ರಾಮಾಂತರ ಯೂಥ್ ಅಧ್ಯಕ್ಷ ಕರಳಪುರ ವಿಜಯ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.