ಕೋಟ: ಕೋಟ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಶನಿವಾರ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿಜೆಪಿಯವರ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗಡೆ ಭಾಗವಹಿಸಿ ಬಿಜೆಪಿಯವರು ಹೇಳಿದ ಸುಳ್ಳಿನ ಬಗ್ಗೆ ವಿವರಣೆಯನ್ನು ನೀಡಿ ಸಾರ್ವಜನಿಕರಿಗೆ ಸತ್ಯದರ್ಶನವನ್ನು ಮಾಡಿದರಲ್ಲದೆ, ಬಜೆಪಿಯ ನಡೆಯನ್ನು ಕಟುವಾಗಿ ಟೀಕಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಎ.ಕುಂದರ್, ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೋಟ ವ್ಯವಸಾಯಕ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ತಿಮ್ಮ ಪೂಜಾರಿ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಅಚ್ಯುತ ಪೂಜಾರಿ, ಗ್ರಾಮೀಣ ಸಮಿತಿ ಅಧ್ಯಕ್ಷರಾದ ಚಂದ್ರ ಆಚಾರ್, ಇಂಟಕ್ ಅಧ್ಯಕ್ಷ ದೇವೇಂದ್ರ ಗಾಣಿಗ, ಸತೀಶ್ ಕುಂದರ್, ಅಶೋಕ್ ಶೆಟ್ಟಿ, ಗಣೇಶ್ ಪೂಜಾರಿ, ಹಿಂದುಳಿದ ವರ್ಗಗಳ ಅಧ್ಯಕ್ಷ ದಿನೇಶ್ ಬಂಗೇರ, ಅಮೃತೇಶ್ವರಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಶಿವ ಪೂಜಾರಿ, ಕಾರ್ಮಿಕ ಘಟಕದ ಅಧ್ಯಕ್ಷ ರವಿ ಪೂಜಾರಿ, ದೇವದಾಸ ಕಾಂಚನ್, ಮಹಾಬಲ ಮಡಿವಾಳ, ಭಾಸ್ಕರ ಶೆಟ್ಟಿ ಇನ್ನಿತರ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.