ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ರಾಜ್ಯಾದ್ಯಂತ ಯಶಸ್ವಿಯಾಗಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪಿತೂರಿ ನಡೆಸುತ್ತಿದ್ದಾರೆ ಎಂಬ ಬಿಜೆಪಿಯವರ ಸುಳ್ಳುಗಳಿಗೆ ಪ್ರತಿಯಾಗಿ ಕಾಂಗ್ರೆಸ್ ಜನರಿಗೆ ಸತ್ಯದರ್ಶನ ಮಾಡಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಕೇಂದ್ರ ಸರ್ಕಾರದ ವೈಫಲ್ಯ, ಬಡವರಿಗೆ ಹಕ್ಕುಪತ್ರ ಮತ್ತು ನಿವೇಶನ ನೀಡಲು ವಿಳಂಬ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸುಳ್ಳು ಆರೋಪಗಳನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಪ್ರಜಾಸೌಧದ ಮುಂಭಾಗ ಸೋಮವಾರ ಆಯೋಜಿಸಿದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ ಮಾತನಾಡಿದರು. ಪ್ರಮುಖರಾದ ನವೀನ್‌ಚಂದ್ರ ಸುವರ್ಣ, ವಿಕ್ರಂ ಕಾಪು, ಪ್ರಶಾಂತ್ ಜತ್ತನ್ನ, ಶರ್ಪುದ್ದೀನ್ ಶೇಖ್, ಮಹಮ್ಮದ್ ನಿಯಾಜ್, ಹಸನಬ್ಬ ಶೇಖ್ ಶಿರ್ವ, ಶಾಂತಲತಾ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಐಡಾ ಗಿಬ್ಬಾ ಡಿಸೋಜ, ಅಮೀರ್ ಮಹಮ್ಮದ್, ಗೋಪಾಲ ಪೂಜಾರಿ ಮತ್ತಿತರರಿದ್ದರು.