ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದಲ್ಲಿ ಏ.20ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಪೂರ್ವಭಾವಿ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಬುಧವಾರ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ಕಾರ್ಯಕರ್ತರ ಸಮಾವೇಶವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಚಿವರು ಹಾಗೂ ಪಕ್ಷದ ರಾಜ್ಯ, ಜಿಲ್ಲಾಮಟ್ಟದ ಪ್ರಮುಖರು ಪಾಲ್ಗೊಳ್ಳುತ್ತಾರೆ. ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನೆಯ ಕೈಪಿಡಿ ಬಿಡುಗಡೆಗೊಳಿಸಲಾಗುವುದು ಎಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಟ, ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಕೆಪಿಸಿಸಿ ಸದಸ್ಯರಾದ ಕೇಶವ ಪಿ.ಬೆಳಾಲು, ಪಕ್ಷದ ಪ್ರಮುಖರಾದ ಸುಭಾಷ್ ಚಂದ್ರ ರೈ, ಲೋಕೇಶ್ವರಿ ವಿನಯ ಚಂದ್ರಗೌಡ, ವಂದನಾ ಭಂಡಾರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಾಲಾಡಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಬಿ.ಎಂ.ಹಮೀದ್, ಅಲ್ಪಸಂಖ್ಯಾತ ಘಟಕದ ನಗರ ಸಮಿತಿಯ ಅಧ್ಯಕ್ಷ ಅಬ್ದುಲ್ ಕರಿಮ್ ಗೇರ್‌ಕಟ್ಟೆ, ಗ್ರಾಮೀಣ ಸಮಿತಿ ಅಧ್ಯಕ್ಷ ಸೆಬಾಸ್ಟಿಯನ್ ಮೊದಲಾದವರು ಉಪಸ್ಥಿತರಿದ್ದರು.