ಜಿಲ್ಲೆ

ಕನಿಷ್ಠ 30 ಸಂಪರ್ಕಿತರ ಟೆಸ್ಟ್ ಕಡ್ಡಾಯ: ಆರೋಗ್ಯ ಇಲಾಖೆಗೆ ಚಿತ್ರದುರ್ಗ ಡಿಸಿ ಖಡಕ್ ಸೂಚನೆ

Chitradurga

ಚಿತ್ರದುರ್ಗ: ಕೋವಿಡ್ ಸೋಂಕಿತರಿಗೆ ಸಂಬಂಧಿಸಿದಂತೆ 10 ಪ್ರಾಥಮಿಕ, 20 ದ್ವಿತೀಯ ಸಂಪರ್ಕಿತರನ್ನು ತಪಾಸಣೆಗೆ ಒಳಪಡಿಸಲು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ನಿಯಂತ್ರಣ ಕುರಿತಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು,

ಕೋವಿಡ್ ಸೋಂಕಿತರ ಸಂಖ್ಯೆ ದಿನೆದಿನೇ ಹೆಚ್ಚಾಗುತ್ತಿದೆ. ಸಂಪರ್ಕಿತರನ್ನು ಗುರುತಿಸಬೇಕು. ಹೊರ ಜಿಲ್ಲೆ, ರಾಜ್ಯಗಳಿಂದ ವಾಹನಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು.

ಬೆಂಗಳೂರಿನಿಂದ ಹಿರಿಯೂರಿಗೆ ಬಹಳಷ್ಟು ಜನರು ಪ್ರಯಾಣಿಸುತ್ತಿದ್ದು ಹೀಗೆ ಬರುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಬೇಕು ಎಂದು ಸೂಚಿಸಿದರು.

ಎಸ್ಪಿ ಜಿ.ರಾಧಿಕಾ ಮಾತನಾಡಿ, ಹಿರಿಯೂರು, ಮೊಳಕಾಲ್ಮೂರು, ರಾಂಪುರ, ರಾಯದುರ್ಗ ಸೇರಿ ಜಿಲ್ಲೆಯ ವಿವಿಧೆಡೆ ಪೊಲೀಸ್, ತಾಲೂಕು ಆಡಳಿತ, ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ತಪಾಸಣೆ ಮಾಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಜಿಪಂ ಸಿಇಒ ಡಾ.ಕೆ.ನಂದಿನಿದೇವಿ, ಎಸಿ ವಿ.ಪ್ರಸನ್ನ, ಡಿ ಎಚ್‌ಒ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್,ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಜೆ.ಬಸವರಾಜಪ್ಪ, ಆರ್‌ಸಿಎಚ್ ಅಧಿಕಾರಿ ಡಾ.ಕುಮಾರಸ್ವಾಮಿ ಮತ್ತಿತರರಿದ್ದರು.