ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಗಣ್ಯರು ಚಾಲನೆ ನೀಡಿದರು. ಶಿವು, ಕಿರಣ್‌ಕುಮಾರ್, ಮಹೇಶ್ ಇತರರಿದ್ದರು. 
ಜಿಲ್ಲೆ

ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಎಂ.ರವಿ

ಬೆಟ್ಟದಪುರ: ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ವ್ಯಾಪಕವಾಗಬೇಕು. ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ ಎಂದು ಶಿವು ಸೈನಿಕ ಅಕಾಡೆಮಿ ಮುಖ್ಯಸ್ಥ ಶಿವು ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ಭಾನುವಾರ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಗಿಡ-ಮರಗಳು ಮಾನವನ ಜೀವನಾಡಿಗಳು. ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವುದರ ಮೂಲಕ ಪರಿಸರ ಜಾಗೃತಿ ಮೂಡಿಸಬೇಕು. ಪರಿಸರ ಅಸಮತೋಲನ ತಪ್ಪಿಸಲು ಹೆಚ್ಚು ಗಿಡಗಳನ್ನು ಬೆಳೆಸಿ, ಕಾಡುಗಳನ್ನು ಸಂರಕ್ಷಿಸಿದರೆ ಮಾತ್ರ ಭವಿಷ್ಯದಲ್ಲಿ ಎಲ್ಲರೂ ಸಮೃದ್ಧ ಜೀವನ ನಡೆಸಲು ಸಾಧ್ಯ ಎಂದರು. ವಲಯ ಅರಣ್ಯ ಅಧಿಕಾರಿ ಕಿರಣ್‌ಕುಮಾರ್, ಉಪವಲಯ ಅರಣ್ಯ ಅಧಿಕಾರಿ ಮಹೇಶ್, ಮುಖಂಡರಾದ ಸ್ವಾಮಿ, ರೇವಣ್ಣ ಅಕಾಡೆಮಿಯ ವಿದ್ಯಾರ್ಥಿಗಳು ಇತರರು ಇದ್ದರು.