ಕೆ.ಆರ್.ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಅಂಗವಾಗಿ ದಲಿತಪರ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಸಂವಿಧಾನ ಅರಿವು ಮತ್ತು ಉಳಿವಿಗಾಗಿ ನಾವು ಜಾಥಾ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆ ಓದಲಾಯಿತು. ರಾಜಯ್ಯ, ಮಧುವನಹಳ್ಳಿ ರವಿಕುಮಾರ್, ಮಂಜುರಾಜ್, ಡಿ.ಕೆ.ಕೊಪ್ಪಲು ರಾಜಯ್ಯ, ಮನುಗುನಳ್ಳಿ ರಾಜಯ್ಯ, ಕುಮಾರ್ ಇನ್ನಿತರರು ಇದ್ದರು. 
ಜಿಲ್ಲೆ

ಕೆ.ಆರ್.ನಗರದಲ್ಲಿ ಸಂವಿಧಾನ ಅರಿವು

ಲೋಕೇಶ್ ಮನು. ಡಿ

ಕೆ.ಆರ್.ನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಆಚರಣೆಯ ಅಂಗವಾಗಿ ದಲಿತಪರ ಸಂಘಟನೆಗಳ ವತಿಯಿಂದ ಪಟ್ಟಣದಲ್ಲಿ ಭಾನುವಾರ ರಾತ್ರಿ ಸಂವಿಧಾನ ಅರಿವು ಮತ್ತು ಉಳಿವಿಗಾಗಿ ನಾವು ಜಾಥಾ ಆಯೋಜಿಸಲಾಗಿತ್ತು.


ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಜಮಾವಣೆಗೊಂಡ ವಿವಿಧ ದಲಿತಪರ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಸದಸ್ಯರು ಹಾಗೂ ಮಹಿಳೆಯರು ಸೇರಿದಂತೆ ಬಾಬಾ ಸಾಹೇಬರ ಫೋಟೋವನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ಪಟ್ಟಣದ ಗರುಡುಗಂಭ ವೃತ್ತ, ವಾಣಿವಿಲಾಸ ರಸ್ತೆ, ಡಾ.ಬಾಬು ಜಗಜೀವನರಾಮ್ ವೃತ್ತ, ಚಂದ್ರಮೌಳೇಶ್ವರ ರಸ್ತೆ, ಡಾ.ರಾಜ್‌ಕುಮಾರ್ ಬಾನಂಗಳದ ಮೂಲಕ ತೆರಳಿ ಬಜಾರ್ ರಸ್ತೆಯಲ್ಲಿ ಸಂಚರಿಸಿ ಸಂವಿಧಾನ ಕುರಿತು ಅರಿವು ಮೂಡಿಸಿದರು. ಮೆರವಣಿಗೆಯುದ್ದಕ್ಕೂ ಸಂವಿಧಾನ ಮತ್ತು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪರ ಜಯಘೋಷ ಮೊಳಗಿತು. ನಂತರ ಮೈಸೂರು ರಸ್ತೆ ಮೂಲಕ ಮತ್ತೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಬಳಿ ಸೇರಿ ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಸಮಾಪ್ತಿಗೊಳಿಸಿದರು.

ಜಿಪಂ ಮಾಜಿ ಸದಸ್ಯ ರಾಜಯ್ಯ, ತಾಪಂ ಮಾಜಿ ಅಧ್ಯಕ್ಷ ಎಂ.ಎಚ್.ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹಾದೇವ್, ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ಎಸ್ಸಿ ಘಟಕದ ಅಧ್ಯಕ್ಷ ನಂದೀಶ್, ಎಂಎಸ್‌ಎಸ್ ಅಧ್ಯಕ್ಷ ಮಧುವನಹಳ್ಳಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎಚ್.ಕುಮಾರ್, ಸಹ ಕಾರ್ಯದರ್ಶಿ ಕಂಚುಗಾರಕೊಪ್ಪಲು ಸ್ವಾಮಿ, ಭೀಮ್ ಆರ್ಮಿ ಅಧ್ಯಕ್ಷ ಗುರುಸ್ವಾಮಿ, ದಲಿತ ಮುಖಂಡರಾದ ಮಂಜುರಾಜ್, ಡಿ.ಕೆ.ಕೊಪ್ಪಲು ರಾಜಯ್ಯ, ಮನುಗುನಳ್ಳಿ ರಾಜಯ್ಯ, ಕುಮಾರ್, ರಾಜೇಶ್, ಎಂ.ಎಸ್.ನಂಜುಂಡಸ್ವಾಮಿ, ಎಂ.ಎ.ನಾಗೇಂದ್ರ, ರವಿಪೂಜಾರಿ ಇತರರು ಇದ್ದರು.