ರಾಮದುರ್ಗ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ನಡೆದುಕೊಂಡು ಬಂದಿದೆ. ಬಿಜೆಪಿಗರು ಸಂವಿಧಾನವನ್ನೇ ಬದಲಿಸುವ ಹೇಳಿಕೆ ನೀಡಿದ ಪರಿಣಾಮ ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಮನೆಗೆ ಕಳಿಸಿದ್ದಾರೆ ಎಂದು ಶಾಸಕ ಅಶೋಕ ಪಟ್ಟಣ ಆರೋಪಿಸಿದರು.
ಪಟ್ಟಣದ ಪುರಸಭೆ ಸಾಂಸತಿಕ ಭವನದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ದಲಿತ ಸಂಟನೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಹಸೀಲ್ದಾರ್ ಪ್ರಕಾಶ ಹೋಳೆಪ್ಪಗೋಳ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಆದರ್ಶ ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದರು. ಸಾಮಾಜಿಕ ಕಾರ್ಯಕರ್ತ ಮಹಾಲಿಂಗಪ್ಪ ಅಲಬಾಳ ಮಾತನಾಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಲಾಯಿತು.
ತಾಪಂ ಇಒ ಬಸವರಾಜ ಐನಾಪುರ, ಬಿಇಒ ಆರ್.ಟಿ ಬಳಿಗಾರ, ಡಿವೈಎಎಸ್ಪಿ ಚಿದಂಬರ ಮಡಿವಾಳರ ಇತರರಿದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ ಸಂವಿಧಾನದ ಪೀಠಿಕೆ ಓದಿದರು. ವಿ.ಎಸ್.ಹಿರೇಮಠ ನಿರೂಪಿಸಿದರು.