ಜಿಲ್ಲೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ

arunakunigal

ಬೆಂಗಳೂರು: ಸಂವಿಧಾನ ದಿನಾಚರಣೆ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಮುನಿರಾಜು, ಶಾಸಕ ಎನ್.ಮಹೇಶ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.