ಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯನ್ನು ವಕೀಲೆ ಅಶ್ವಿನಿ ಉದ್ಘಾಟಿಸಿದರು. ಮಹೇಶ್, ಶಂಭಯ್ಯ, ಸತೀಶ್, ಪ್ರಭುರಾಜ್, ಮಹದೇವಸ್ವಾಮಿ ಇತರರು ಇದ್ದರು. 
ಜಿಲ್ಲೆ

ಸಂವಿಧಾನ ಉತ್ತಮ ಸಮಾಜಕ್ಕೆ ದಾರಿದೀಪ

ಎಂ.ರವಿ

ಹನೂರು: ಪ್ರತಿ ವರ್ಗಕ್ಕೂ ಸಮಾನತೆಯನ್ನು ತಂದುಕೊಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರೂಪಿಸಿರುವ ಸಂವಿಧಾನ ಉತ್ತಮ ಸಮಾಜಕ್ಕೆ ದಾರಿದೀಪವಾಗಿದೆ ಎಂದು ವಕೀಲೆ ಅಶ್ವಿನಿ ತಿಳಿಸಿದರು.

ತಾಲೂಕಿನ ಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಚಾಮರಾಜನಗರ ನೆಹರು ಯುವ ಕೇಂದ್ರ ಹಾಗೂ ಮಂಗಲ ಬೋಧಿಸತ್ವ ಯುವಜನ ಕಲಾ ಸಂಘದ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ ಜಾತ್ಯತೀತ ಹಾಗೂ ಲಿಂಗ ತಾರತಮ್ಯವನ್ನು ತೊಡೆದು ಹಾಕಲು ಕಾನೂನುಗಳನ್ನು ರೂಪಿಸಿದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ. ಇದರ ಪ್ರಸ್ತಾವನೆಯನ್ನು ದೇಶದ ಸಮಗ್ರ ನಾಗರಿಕರಿಗೆ ರೂಪಿಸಿ ಅಧಿನಿಯಮಿಸಿ ಅರ್ಪಿಸಿಕೊಳ್ಳಲಾಗಿದೆ. ಇಲ್ಲಿ ಹೆಣ್ಣು-ಗಂಡು, ಮೇಲು-ಕೀಳು ಇತ್ಯಾದಿ ಭೇದ-ಭಾವಗಳಿಗೆ ಅವಕಾಶವಿಲ್ಲ. ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ, ವಿಚಾರ ಅಭಿವ್ಯಕ್ತ ಇನ್ನು ಮುಂತಾದ ಸಮಾನತೆಯನ್ನು ದೊರಕಿಸಿ ಅಂಶಗಳನ್ನು ಒಳಗೊಂಡಿದೆ. ಹಾಗಾಗಿ ದೇಶದ ಸಂವಿಧಾನ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದೆ. ಹಾಗಾಗಿ ಇತರ ದೇಶಗಳು ಸಹ ನಮ್ಮ ಸಂವಿಧಾನವನ್ನು ಅನುಸರಿಸುತ್ತಿವೆ. ಸಂವಿಧಾನದ ಆಧಾರದ ಮೇಲೆ ಸರ್ಕಾರ ಆಡಳಿತ ನಡೆಸುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಸಂವಿಧಾನವನ್ನು ಗೌರವಿಸುವುದರ ಮೂಲಕ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದಕ್ಕೂ ಮುನ್ನಾ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಆರ್.ಮಹೇಶ್, ಶಿಕ್ಷಕರಾದ ಸತೀಶ್, ಶಂಭಯ್ಯ, ಕಲಾ, ಪ್ರಭುರಾಜ್, ಮಹದೇವಸ್ವಾಮಿ, ಕಲಾ ಸಂಘದ ಪದಾಧಿಕಾರಿಗಳು ಹಾಗೂ ಇನ್ನಿತರರು ಇದ್ದರು.