ಜಿಲ್ಲೆ

ಮುಂಡಗೋಡ, ಕುಮಟಾದಲ್ಲಿ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾ

ಮುಂಡಗೋಡ: ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಗುರುವಾರ ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮಗೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಿದರು. ಗ್ರಾಮ ಪಂಚಾಯತ್‌ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕುಮಟಾದಲ್ಲಿ

ಇಇನ್ನೊಂದು ವಾಹನ ಕರಾವಳಿಯಲ್ಲಿ ಸಂಚರಿಸುತ್ತಿದ್ದು, ಗುರುವಾರ ಕುಮಟಾ ತಾಲೂಕಿನ ಕೂಜಳ್ಳಿ, ವಾಲಗಳ್ಳಿ ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.


ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿ ಜಾಥಾ ವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.