ಜಿಲ್ಲೆ

ಮಹೇಶ ಕಾಲೇಜಿನಲ್ಲಿ ಸಂವಿಧಾನ ದಿನ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ಎನ್ಎಲ್ಇ ಸಂಸ್ಥೆಯ ಡಾ. ಆರ್.ಬಿ. ಪಾಟೀಲ ಮಹೇಶ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಸಂವಿಧಾನ ದಿನ ಆಚರಿಸಲಾಯಿತು.

ಪ್ರಾಚಾರ್ಯ ರಾಮಮೋಹನ ಎಚ್.ಕೆ. ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಮ್ಮ ಸಂವಿಧಾನ ನಮ್ಮ ಹೆಮ್ಮೆ, ಸಂವಿಧಾನ ಪ್ರಸ್ತಾವನೆ, ಮೂಲಭೂತ ಹಕ್ಕುಗಳು ಮತ್ತು ರಾಜನೀತಿ ನಿರ್ದೇಶಕ ತತ್ವಗಳು ಹಾಗೂ ಕಾನೂನಿನ ಅರಿವು, ಅಂಬೇಡ್ಕರ ಅವರ ವಿಚಾರಧಾರೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡುವ ಮೂಲಕ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕೆಂದು ತಿಳಿಸಿದರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಐ.ಎಸ್. ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.