ಜಿಲ್ಲೆ

ಸಕ್ರಿ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ಹೆಗ್ಗೇರಿಯಲ್ಲಿರುವ ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ಸಂವಿಧಾನ ದಿನ ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಜಿ.ಕೆ. ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಶಾರದಾ ಪಾಟೀಲ, ಸಂವಿಧಾನದ ಸಿದ್ಧಾಂತಗಳನ್ನು ಗೌರವಿಸುವ ಸಲುವಾಗಿ ಈ ದಿನ ಆಚರಿಸಲಾಗುತ್ತದೆ. ಸಂವಿಧಾನವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲಸ್ಥಂಭವಾಗಿದ್ದು, ನಾಗರಿಕರ ಹಕ್ಕುಗಳು, ಕರ್ತವ್ಯಗಳು ಹಾಗೂ ಸರ್ಕಾರದ ಕಾರ್ಯಕಲಾಪಗಳನ್ನು ನಿರ್ಧರಿಸುತ್ತದೆ. ಸಂವಿಧಾನವು ಭಾರತವನ್ನು ಪ್ರಜಾಸತ್ತಾತ್ಮಕ, ಸಂವಿಧಾನಾತ್ಮಕ, ಧರ್ಮನಿರಪೇಕ್ಷ ಹಾಗೂ ಸಮಾನತೆಯ ದೇಶವನ್ನಾಗಿ ಮಾಡಲು ನಾಂದಿಯಾಗಿದೆ ಎಂದು ತಿಳಿಸಿದರು.

ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ದೀಪಾ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಪ್ರತಿಜ್ಞಾವಿಧಿ ಬೋಧಿಸಿದರು.

ಮಹಾವಿದ್ಯಾಲಯ ಪ್ರಾಚಾರ್ಯ ಡಾ. ರೂಪಾ ಇಂಗಳಹಳ್ಳಿ, ಸುರೇಶ ಲಿಂಬಿಕಾಯಿ, ಪ್ರೊ. ಪೂರ್ಣಿಮಾ ಕುರ್ಡಿಕೇರಿ, ಶೈಲಜಾ ಹಗೇದಾಳ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.