ಬಾಳೆಹೊನ್ನೂರು: ಪಟ್ಟಣದ ವಿದ್ಯಾಗಣಪತಿ ಸೇವಾ ಸಮಿತಿ ಸೆ.7ರಿಂದ ಆಯೋಜಿಸಿರುವ 66ನೇ ವರ್ಷದ ಗಣೇಶೋತ್ಸವದ ಪೆಂಡಾಲ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಪೆಂಡಾಲ್ ನಿರ್ಮಾಣದ ಪೂಜಾ ಕಾರ್ಯದಲ್ಲಿ ಸಮಿತಿ ಅಧ್ಯಕ್ಷ ಟಿ.ಆರ್.ಧರ್ಮಪ್ಪಗೌಡ ಮಾತನಾಡಿ, ಈ ಬಾರಿ 66ನೇ ವರ್ಷದ ಗಣೇಶೋತ್ಸವವನ್ನು ಸೆ.7ರಿಂದ 21ರವರೆಗೆ ನಡೆಸಲಿದೆ. ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಎರಡು ಸಾವಿರಕ್ಕೂ ಅಧಿಕ ಭಕ್ತರು ಒಮ್ಮೆಲೆ ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪೆಂಡಾಲ್‌ಗೆ ವಿವಿಧ ವಿದ್ಯುತ್ ದೀಪಾಲಂಕಾರಗಳನ್ನು ಮಾಡಿ ಆಕರ್ಷಕಗೊಳಿಸಲಾಗುವುದು ಎಂದು ತಿಳಿಸಿದರು.
ಪ್ರಧಾನ ಅರ್ಚಕ ಕೆ.ಎಸ್.ಪ್ರಕಾಶ್ ಭಟ್ ನೇತೃತ್ವದಲ್ಲಿ ಪೆಂಡಾಲ್ ನಿರ್ಮಾಣಕ್ಕೆ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಚಾಲನೆ ನೀಡಲಾಯಿತು. ಸಮಿತಿ ಕಾರ್ಯದರ್ಶಿ ಸುರೇಂದ್ರ, ಸಿ.ವಿ.ಸುನೀಲ್, ಖಜಾಂಚಿ ತ್ರಿವಿಕಮಭಟ್, ಸುಧಾಕರ್, ಪೆಂಡಾಲ್ ನಿರ್ಮಾಣದ ಉಸ್ತುವಾರಿ ಗೋವಿಂದರಾಜು, ಭರತ್ ಮತ್ತಿತರರು ಹಾಜರಿದ್ದರು.