ಚಿಕ್ಕಕೊಡಗಲಿ ಎಲ್‌ಟಿ ಗ್ರಾಮದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಆಟದ ಮೈದಾನ ಉದ್ಘಾಟಿಸಿದರು. 
ಜಿಲ್ಲೆ

ಪ್ರತಿ ಗ್ರಾಮದಲ್ಲಿ ಆಟದ ಮೈದಾನ ನಿರ್ಮಾಣ

ದತ್ತಾತ್ರೇಯ ಪಿ ಕುಲಕರ್ಣಿ

ಇಳಕಲ್ಲ: ತಾಲೂಕಿನ ಚಿಕ್ಕಕೊಡಗಲಿ ಎಲ್‌ಟಿ 2 ರಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ನಿರ್ಮಿಸಿದ ಆಟದ ಮೈದಾನವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.

ಮತಕ್ಷೇತ್ರದ ಎಲ್ಲ ಗ್ರಾಮಗಳಲ್ಲಿಯೂ ಆಟದ ಮೈದಾನ ನಿರ್ಮಿಸುವ ಗುರಿ ಹೊಂದಿದ್ದೇನೆ ಎಂದು ಶಾಸಕರು ತಿಳಿಸಿದರು.

ನಗರದಲ್ಲಿರುವಂತೆ ಗ್ರಾಮೀಣ ಭಾಗದಲ್ಲಿಯೂ ಉತ್ತಮ ಮೈದಾನಗಳನ್ನು ನಿರ್ಮಿಸುವುದಾಗಿ ಭರವಸೆ ನೀಡಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮರುಳಿಧರ ದೇಶಪಾಂಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ್, ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ್, ಕಾಂಗ್ರೆಸ್ ಮುಖಂಡರಾದ ವಿಜಯಮಹಾಂತೇಶ ಗದ್ದನಕೇರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಪಾಲ ನಾಯಕ್ ಉಪಸ್ಥಿತರಿದ್ದರು.