ಜಿಲ್ಲೆ

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Haveri - Kariyappa Aralikatti

ಶಿಗ್ಗಾಂವಿ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಪಟ್ಟಣದ ಹಳೇ ಪೇಟೆಯಲ್ಲಿ ಬುಧವಾರ ಸಂಭವಿಸಿದೆ.
ತಾಲೂಕಿನ ಬಂಕಾಪುರದ ಶೇಖಪ್ಪ ಪುಟ್ಟಪ್ಪ ಕಳ್ಳಿಮನಿ (48) ಮೃತ ಕಾರ್ಮಿಕ.
ಇವರು ನಿರ್ಮಾಣ ಹಂತದ ಕಟ್ಟಡದಲ್ಲಿ ಸಿಲ್ಲಿಂಗ್ ಪ್ಲಾಸ್ಟರ್ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಚಿಕಿತ್ಸೆಗಾಗಿ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.