ಮದ್ದೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು ಸಂಯೋಜಿತ) ಮದ್ದೂರು ತಾಲೂಕು ಸಮಿತಿ ವತಿಯಿಂದ ಆ.16 ರಂದು ಬೆಳಗ್ಗೆ 10.30ಕ್ಕೆ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪಾಪಾಚಾರಿ, ಕಾರ್ಯದರ್ಶಿ ವಿ.ಶಿವಕುಮಾರ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 10.30 ಕ್ಕೆ ಶ್ರೀ ಮದ್ದೂರಮ್ಮ ದೇವಸ್ಥಾನದ ಬಳಿಯಿರುವ ಕಚೇರಿಯಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಆದ್ದರಿಂದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ.