ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಟೆಕ್ ಪಾರ್ಕ್ಗಳಲ್ಲಿರುವ ಸಂಸ್ಥೆಗಳು ಎದುರಿಸುತ್ತಿರುವ ಸವಾಲು ಮತ್ತು ಸಮಸ್ಯೆಯನ್ನು ಪ್ರಾಮುಖ್ಯತೆ ಮೇರೆಗೆ ಬಗೆಹರಿಸಲು ರಾಜ್ಯ ಸರ್ಕಾರ, ಸಮಾಲೋಚನಾ ಸಮಿತಿ ರಚಿಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಸಮಿತಿ ಅಧ್ಯಕ್ಷರಾದರೆ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರು ಉಪಾಧ್ಯಕ್ಷರಾಗಿದ್ದಾರೆ. ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರು, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತರು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಮತ್ತು ಡಿಸಿಎಂ ಕಾರ್ಯದರ್ಶಿಯವರು ಸಮಿತಿ ಸದಸ್ಯರಾಗಿದ್ದಾರೆ. ಬಿಬಿಎಂಪಿ ಪ್ರಧಾನ ಅಭಿಯಂತರ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.
ನಗರದಲ್ಲಿ ಇನ್ಪೋಸಿಸ್, ವಿಪ್ರೋ, ಗೂಗಲ್, ಮೈಕ್ರೋಸ್ಟ್ಾ, ಐಬಿಎಂ ಸೇರಿ ವಿಶ್ವದ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಕಂಪನಿಗಳಲ್ಲಿ ಲಾಂತರ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್, ಮಾನ್ಯತಾ ಟೆಕ್ ಪಾರ್ಕ್ ಸೇರಿ ನಗರದ ವಿವಿಧ ಕಡೆಗಳಲ್ಲಿರುವ ಟೆಕ್ ಪಾರ್ಕ್ಗಳು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.